Wednesday, September 30, 2026
Wednesday, September 30, 2026

District Consumer Disputes Redressal Commission ವಾಟರ್ ಪ್ಯೂರಿಫೈಯರ್ ಕಂಪನಿಗೆ ದಂಡ ಹಾಗೂ ಗ್ರಾಹಕನಿಗೆ ಪರಿಹಾರ ನೀಡಲು ಜಿಲ್ಲಾ ಗ್ರಾಹಕ ಆಯೋಗದ ಆದೇಶ

Date:

District Consumer Disputes Redressal Commission ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ ಎಂದು ಸುಳ್ಳು ಭರವಸೆ ನೀಡಿ ವಾಟರ್ ಪ್ಯೂರಿಫೈಯರ್ ಮಾರಾಟ ಮಾಡಿ, ಹಣ ವಾಪಸ್ ನೀಡದೆ ಸೇವಾ ನ್ಯೂನ್ಯತೆ ಎಸಗಿದ್ದ ‘ಎನಾಜಿಕ್ ಇಂಟರ್‌ನ್ಯಾಷನಲ್’ ಕಂಪನಿ ಮತ್ತು ಅದರ ಡಿಸ್ಟ್ರಿಬ್ಯೂಟರ್‌ಗಳಿಗೆ ಗ್ರಾಹಕರಿಗೆ ಸೂಕ್ತ ಪರಿಹಾರ ನೀಡುವಂತೆ ಶಿವಮೊಗ್ಗದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ಆದೇಶ ನೀಡಿದೆ.
ಪ್ರಕರಣದ ಹಿನ್ನೆಲೆ:
ಶಿವಮೊಗ್ಗದ ಸ್ವಾಮಿ ವಿವೇಕಾನಂದ ಬಡಾವಣೆಯ ನಿವಾಸಿ ಶಿವಕುಮಾರ ಹಂಪಳ್ಳಿ ಎಂಬುವರು ದಿನಾಂಕ 12/06/2024 ರಂದು ಎನಾಜಿಕ್ ಇಂಟರ್‌ನ್ಯಾಷನಲ್ ಕಂಪನಿಯ ಡಿಸ್ಟ್ರಿಬ್ಯೂಟರ್‌‌ಗಳಾದ ಬಸವಣ್ಣ (ಶಿವಮೊಗ್ಗ) ಹಾಗೂ ಕೆ. ಅರುಣ್ ಕುಮಾರ್ (ಮೈಸೂರು) ಅವರ ಮೂಲಕ ರೂ. 2,77,000/- ನೀಡಿ ವಾಟರ್ ಪ್ಯೂರಿಫೈಯರ್ ಖರೀದಿಸಿದ್ದರು. “ಈ ಯಂತ್ರದ ನೀರನ್ನು ಒಂದು ತಿಂಗಳು ಉಪಯೋಗಿಸಿದರೆ ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ, ಇಲ್ಲದಿದ್ದರೆ ಯಂತ್ರವನ್ನು ವಾಪಸ್ ಪಡೆದು ಹಣ ಹಿಂದಿರುಗಿಸಲಾಗುವುದು” ಎಂದು ಭರವಸೆ ನೀಡಲಾಗಿತ್ತು.
ಆದರೆ, ದೂರುದಾರರು ನೀರು ಬಳಸಿದ ನಂತರ ವೈದ್ಯಕೀಯ ತಪಾಸಣೆ ಮಾಡಿಸಿದಾಗ ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗದೆ ಹೆಚ್ಚಾಗಿತ್ತು. ಈ ಬಗ್ಗೆ ಎದುರುದಾರರನ್ನು ಸಂಪರ್ಕಿಸಿದಾಗ, ಅವರು ಯಂತ್ರ ವಾಪಸ್ ಪಡೆದು ಪೂರ್ತಿ ಹಣ ನೀಡುವ ಬದಲು ಕೇವಲ ರೂ. 12,350/- ಮಾತ್ರ ಜಮಾ ಮಾಡಿದ್ದರು. ಉಳಿದ ಹಣಕ್ಕಾಗಿ ಹಲವು ಬಾರಿ ಮನವಿ ಮಾಡಿದರೂ ಹಾಗೂ ನೋಟೀಸ್ ನೀಡಿದರೂ ಸ್ಪಂದಿಸದ ಕಾರಣ, ದೂರುದಾರರು ಗ್ರಾಹಕ ಆಯೋಗದ ಮೆಟ್ಟಿಲೇರಿದ್ದರು.
ಆಯೋಗದ ತೀರ್ಪು:
District Consumer Disputes Redressal Commission ದೂರುದಾರರು ಮತ್ತು ಎದುರುದಾರರು ಸಲ್ಲಿಸಿದ ದಾಖಲೆಗಳನ್ನು ಪರಿಶೀಲಿಸಿದ ಜಿಲ್ಲಾ ಗ್ರಾಹಕ ಆಯೋಗವು, ಕಂಪನಿಯು ನೀಡಿರುವ ಭರವಸೆಯಂತೆ ನಡೆದುಕೊಳ್ಳದೆ ಸೇವಾ ನ್ಯೂನ್ಯತೆ ಎಸಗಿದೆ ಎಂದು ತೀರ್ಮಾನಿಸಿದೆ.
ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಹಾಗೂ ಸದಸ್ಯರಾದ ಶ್ರೀ ಬಿ.ಡಿ.ಯೋಗಾನಂದ ಭಾಂಡ್ಯ ಅವರಿದ್ದ ಪೀಠವು ಈ ಕೆಳಗಿನಂತೆ ಆದೇಶಿಸಿದೆ:
ಎದುರುದಾರರು ಜಂಟಿಯಾಗಿ ಮತ್ತು ಪ್ರತ್ಯೇಕವಾಗಿ ದೂರುದಾರರಿಗೆ ರೂ. 2,64,650/- ಗಳನ್ನು ಆದೇಶವಾದ 45 ದಿನಗಳ ಒಳಗೆ ವಾಪಸ್ ನೀಡಬೇಕು. ತಪ್ಪಿದ್ದಲ್ಲಿ ಶೇ. 9 ರ ಬಡ್ಡಿಯೊಂದಿಗೆ ಪಾವತಿಸಬೇಕು.
ಮಾನಸಿಕ ವೇದನೆಗಾಗಿ ರೂ. 30,000/- ಹಾಗೂ ದೂರಿನ ಖರ್ಚುವೆಚ್ಚಕ್ಕಾಗಿ ರೂ. 10,000/- ಗಳನ್ನು ಆದೇಶವಾದ 45 ದಿನಗಳ ಒಳಗೆ ಪಾವತಿಸತಕ್ಕದ್ದು. ತಪ್ಪಿದ್ದಲ್ಲಿ ಶೇ. 10 ರ ಬಡ್ಡಿಯನ್ನು ಸೇರಿಸಿ ಪೂರ್ಣ ಹಣ ಪಾವತಿಸುವವರೆಗೆ ನೀಡಬೇಕು ಎಂದು ಆದೇಶಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...