ಭೂಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲವೃಂದದ ಭೂಮಾಪಕರ ಹುದ್ದೆಗಳ ನೇರ ನೇಮಕಾತಿ ಸಂಬಂಧ ದಿನಾಂಕ: 02.10.2026
ರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:30 ಹಾಗೂ ಮಧ್ಯಾಹ್ನ 02:30 ರಿಂದ ಸಂಜೆ 04:30 ರವರೆಗೆ ಶಿವಮೊಗ್ಗ ನಗರದ 10 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಪಾರದರ್ಶಕವಾಗಿ ಹಾಗೂ ಶಾಂತಿ ಸುವ್ಯವಸ್ಥೆಯಿಂದ ಪರೀಕ್ಷೆಗಳು ನಡೆಯಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರಡಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ದಿನದಂದು ಬೆಳಿಗ್ಗೆ 09:30 ರಿಂದ ಸಂಜೆ 05:30 ರವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಳತೆಯಲ್ಲಿ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ.
ಜೆರಾಕ್ಸ್ / ಟೈಪಿಂಗ್ ಅಂಗಡಿಗಳ ಬಂದ್: ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಟೈಪಿಂಗ್, ಜೆರಾಕ್ಸ್ ಹಾಗೂ ಫ್ಯಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನದಂದು ಬೆಳಿಗ್ಗೆ 09:30 ರಿಂದ ಮಧ್ಯಾಹ್ನ/ಸಂಜೆ 05:30 ರವರೆಗೆ ಮುಚ್ಚಲು ಆದೇಶಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ.Cದ ಮುಖ್ಯ ದ್ವಾರದಲ್ಲಿ ಕಡ್ಡಾಯವಾಗಿ ಆರಕ್ಷಕ ಸಿಬ್ಬಂದಿಯನ್ನು ನಿಯೋಜಿಸಿ, ಅನಗತ್ಯ ವ್ಯಕ್ತಿಗಳ ಚಲನವಲನಗಳನ್ನು ನಿಯಂತ್ರಿಸಲು ಸೂಚಿಸಲಾಗಿದೆ.
ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ/ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರದ ವ್ಯಾಪ್ತಿಯನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
ಭೂಮಾಪಕರ ಹುದ್ದೆಗಳ ನೇರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ
Date:
