Friday, October 2, 2026
Friday, October 2, 2026

ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ – ಕ್ರೀಡೆಯಲ್ಲಿ ಹೆಚ್ಚಿನ ಸಾಧನೆಗೆ ಜಿಲ್ಲಾಧಿಕಾರಿ ಕರೆ

Date:

ಇತ್ತೀಚಿನ ದಿನಗಳಲ್ಲಿ ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ದೇಶವಾಗಿ ಹೊರಹೊಮ್ಮಿದೆ. ಆದರೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಹಾಗೂ ಏಷ್ಯನ್ ಗೇಮ್ಸ್‌ ಮುಂತಾದ ಕ್ರೀಡೆಗಳಲ್ಲಿ ನಾವು ಸಾಧಿಸುತ್ತಿರುವ ಪದಕಗಳ ಸಂಖ್ಯೆ ಇನ್ನೂ ಹೆಚ್ಚಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಭಿಪ್ರಾಯ ಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ‌ ಮಂಗಳವಾರ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ”ದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
” ಚೀನಾದಂತಹ ದೇಶಗಳು ನೂರಕ್ಕೂ ಹೆಚ್ಚು ಚಿನ್ನದ ಪದಕಗಳನ್ನು ಗೆಲ್ಲುತ್ತಿದ್ದರೆ, ನಾವು ಇನ್ನೂ ಹೆಚ್ಚಿನ ಸಾಧನೆ ಮಾಡುವ ಅಗತ್ಯವಿದೆ,” ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.
ಪ್ರತಿಯೊಬ್ಬರ ಆಸಕ್ತಿಯೂ ವಿಭಿನ್ನವಾಗಿರುತ್ತದೆ. ಕೆಲವರು ಶಿಕ್ಷಣ ಹಾಗೂ ಶೈಕ್ಷಣಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿದ್ದರೆ, ನೀವೆಲ್ಲರೂ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡಿದ್ದೀರಿ. ಆದ್ದರಿಂದ ಕ್ರೀಡೆಯಲ್ಲಿ ಸಂಪೂರ್ಣ ಶ್ರದ್ಧೆ ಹಾಗೂ ಪರಿಶ್ರಮದಿಂದ ತೊಡಗಿಸಿಕೊಂಡು ಹೆಚ್ಚಿನ ಸಾಧನೆ ಮಾಡಬೇಕು. ಸರ್ಕಾರದ ಮಟ್ಟದಲ್ಲೂ ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯ ಹಾಗೂ ಬೆಂಬಲವನ್ನು ನೀಡಲಾಗುತ್ತಿದೆ. ಕ್ರೀಡೆಯಲ್ಲಿ ಗೆಲುವು ಮತ್ತು ಸೋಲಿಗಿಂತ ಭಾಗವಹಿಸುವಿಕೆ ಅತ್ಯಂತ ಪ್ರಮುಖವಾದುದ್ದು,” ಎಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರೇಖ್ಯಾ ನಾಯ್ಕ್ ಪ್ರಾಸ್ತಾವಿಕ ವಾಗಿ ಮಾತನಾಡಿ ಈ ಬಾರಿ ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಕ್ರೀಡಾಪಟುಗಳು ಆಲ್ ಲೈನ್ ನೊಂದಣಿಯಾಗಿದ್ದು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸುಮಾರು 6000 ಕ್ಕೂ ಹೆಚ್ಚು ಕ್ರೀಡಾಪಟುಗಳು ನೊಂದಣಿಯಾಗಿರುತ್ತಾರೆ. ಈ ಕ್ರೀಡಾಕೂಟದಲ್ಲಿ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಿಂದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಸುಮಾರು 500 ಸ್ಪರ್ಧಾಳುಗಳು ಭಾಗವಹಿಸುತ್ತಿದ್ದು, ಒಳಾಂಗಣ ಕ್ರೀಡಾಂಗಣ ಮತ್ತು ಕ್ರೀಡಾ ಸಂಕೀರ್ಣ ಗೋಪಾಳದಲ್ಲಿ ಸ್ಪರ್ಧಾಳುಗಳಿಗೆ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಇಲಾಖಾ ತರಬೇತುದಾರರು, ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಯುವ ಕ್ರೀಡಾಪಟುಗಳು, ಕ್ರೀಡಾ ಇಲಾಖೆಯ ಅಧಿಕಾರಿಗಳು ಹಾಗೂ ಹಿರಿಯ ಕ್ರೀಡಾಪಟುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...