Saturday, October 3, 2026
Saturday, October 3, 2026

ಗಾಂಧಿ ಪಾರ್ಕ್‌ನಲ್ಲಿ ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಸನ್ಮಾನ, ‘ಸ್ವಚ್ಛತೆಯೇ ಸೇವೆ’ಗೆ ಕರೆ

Date:

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಜನ್ಮಜಯಂತಿಯ ಅಂಗವಾಗಿ ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಗಾಂಧಿ ಪಾರ್ಕ್‌ನಲ್ಲಿ ಇಂದು ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಪಾಲ್ಗೊಂಡು ಗಾಂಧೀಜಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ನಂತರ ಮಾತನಾಡಿದ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು, “ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದಷ್ಟೇ ಪ್ರಾಮುಖ್ಯತೆಯನ್ನು ಸ್ವಚ್ಛತೆಗೂ ನೀಡಿದ್ದರು. ಅವರ ಈ ಆದರ್ಶವನ್ನು ಸಾಕಾರಗೊಳಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ‘ಸ್ವಚ್ಛತೆಯೇ ಸೇವೆ’ ಆಂದೋಲನವು ಇಡೀ ದೇಶದ ಸಂಸ್ಕಾರವಾಗಿ ಬೆಳೆದಿದೆ. ನಮ್ಮ ಶಿವಮೊಗ್ಗ ನಗರವನ್ನು ಸ್ವಚ್ಛ, ಹಸಿರು ಮತ್ತು ಸುಂದರ ನಗರವನ್ನಾಗಿ ರೂಪಿಸಲು ಸಾರ್ವಜನಿಕರ ಸಹಭಾಗಿತ್ವ ಅತ್ಯಂತ ಪ್ರಮುಖವಾಗಿದೆ,” ಎಂದು ಕರೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...