Saturday, October 3, 2026
Saturday, October 3, 2026

Bharat Scouts and Guides ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ನಲ್ಲಿ ಗಾಂಧೀಜಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಜಯಂತಿ ಆಚರಣೆ

Date:

Bharat Scouts and Guides ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ದೇಶದ ಎರಡನೇ ಪ್ರಧಾನಮಂತ್ರಿ ಲಾಲ್ ಬಹಾದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ನಮ್ಮ ಸ್ಕೌಟ್ ಯೂನಿಟ್‌ನ ಜಂಬೋ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳಿಗಾಗಿ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಮಕ್ಕಳು ದೇಶ ಕಂಡ ವಿವಿಧ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ರಾಷ್ಟ್ರ ನಾಯಕರ ವೇಷಭೂಷಣಗಳನ್ನು ಧರಿಸಿ ಉತ್ಸಾಹದಿಂದ ಭಾಗವಹಿಸಿದರು. ವೇಷಧಾರಿಗಳಾಗಿ ಆಗಮಿಸಿದ ಮಕ್ಕಳಿಗೆ ಜಿಲ್ಲಾ ಮುಖ್ಯ ಆಯುಕ್ತರು ಕಾಣಿಕೆಗಳನ್ನು ನೀಡಿ ಪ್ರೋತ್ಸಾಹಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳು ‘ರಘುಪತಿ ರಾಘವ ರಾಜಾರಾಮ್’ ಹಾಗೂ ‘ವೈಷ್ಣವ ಜನತೋ’ ಭಜನೆಗಳನ್ನು ಹಾಡುವ ಮೂಲಕ ಮಹಾತ್ಮ ಗಾಂಧೀಜಿ ಅವರ ಸರಳತೆ, ಸತ್ಯ ಮತ್ತು ಅಹಿಂಸೆಯ ಸಂದೇಶವನ್ನು ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಅವರ ಸರಳ ಜೀವನ, ಪ್ರಾಮಾಣಿಕತೆ ಹಾಗೂ ದೇಶ ಸೇವೆಯ ಆದರ್ಶಗಳನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನ ಆಯುಕ್ತರಾದ ಶ್ರೀಮತಿ ಶಕುಂತಲಾ ಚಂದ್ರಶೇಖರ್ ಅವರು, ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದೂರ್ ಶಾಸ್ತ್ರಿ ಅವರು ದೇಶದ ಜನತೆಗೆ ಸತ್ಯ, ಸರಳತೆ, ಶಿಸ್ತು ಮತ್ತು ದೇಶಸೇವೆಯ ಮಹತ್ವವನ್ನು ತಮ್ಮ ಜೀವನದ ಮೂಲಕ ತೋರಿಸಿಕೊಟ್ಟ ಮಹನೀಯರು. ಇಂತಹ ಮಹಾನ್ ನಾಯಕರ ಜೀವನಾದರ್ಶಗಳನ್ನು ಮಕ್ಕಳಿಗೆ ಪರಿಚಯಿಸುವುದರಿಂದ ಅವರಲ್ಲಿ ದೇಶಭಕ್ತಿ, ಸೇವಾ ಮನೋಭಾವ ಮತ್ತು ಉತ್ತಮ ನಾಗರಿಕ ಗುಣಗಳನ್ನು ಬೆಳೆಸಲು ಸಾಧ್ಯವಾಗುತ್ತದೆ. ವೇಷಭೂಷಣ ಸ್ಪರ್ಧೆಯಂತಹ ಚಟುವಟಿಕೆಗಳು ಮಕ್ಕಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಹಾಗೂ ನಮ್ಮ ಸ್ವಾತಂತ್ರ್ಯ ಹೋರಾಟದ ಬಗ್ಗೆ ಅರಿವು ಮೂಡಿಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.

Bharat Scouts and Guides ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಮುಖ್ಯ ಆಯುಕ್ತರು ವಹಿಸಿದ್ದರು. ಗೈಡ್ ಆಯುಕ್ತರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಸ್ಕೌಟ್ ಆಯುಕ್ತರು, ಖಜಾಂಚಿ, ಕಾರ್ಯದರ್ಶಿ, ಸಂಪರ್ಕ ಅಧಿಕಾರಿ ಜಿ.ವಿಜಯ್ ಕುಮಾರ್ ಸೇರಿದಂತೆ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಕ್ಕಳ ಉತ್ಸಾಹಭರಿತ ವೇಷಭೂಷಣ ಪ್ರದರ್ಶನ, ದೇಶಭಕ್ತಿ ಗೀತೆಗಳು ಹಾಗೂ ಮಹಾನ್ ನಾಯಕರ ಸ್ಮರಣೆಯೊಂದಿಗೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ನೆರವೇರಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...