ಚಲಿಸುತ್ತಿದ್ದ ಬಸ್‌ನಲ್ಲೇ ಪ್ರಯಾಣಿಕನೊಬ್ಬನಿಗೆ ತೀವ್ರ ಹೃದಯಾಘಾತ ಸಂಭವಿಸಿದ ವೇಳೆ, ಬಸ್ ಚಾಲಕ ಹಾಗೂ ನಿರ್ವಾಹಕರು ಸಮಯಪ್ರಜ್ಞೆ ಮೆರೆದು ಆಸ್ಪತ್ರೆಗೆ ದಾಖಲಿಸಿ ಪ್ರಾಣ ಉಳಿಸಿರುವ ಘಟನೆ ಹೊಸನಗರ ತಾಲೂಕಿನ ಚಿನ್ನಮನೆ ಸಮೀಪ ನಡೆದಿದೆ.
ರಿಪ್ಪನ್ ಪೇಟೆಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಗುರುಶಕ್ತಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಬೆನವಳ್ಳಿಯಿಂದ ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ್ದ ರಮೇಶ್ ಎಂಬ 45 ವರ್ಷದ ಪ್ರಯಾಣಿಕರಿಗೆ ಚಿನ್ನಮನೆ ಸಮೀಪ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ತೀವ್ರ ಅಸ್ವಸ್ಥರಾಗಿದ್ದಾರೆ.
ಪ್ರಯಾಣಿಕನ ಸ್ಥಿತಿ ಗಂಭೀರವಾಗಿರುವುದನ್ನು ಗಮನಿಸಿದ ಬಸ್ ಚಾಲಕ ಮುಸ್ತಾಕ್ ಹಾಗೂ ನಿರ್ವಾಹಕ ಅಶ್ರಫ್ ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಸಮಯ ವ್ಯರ್ಥವಾಗದಂತೆ ಮಧ್ಯದಲ್ಲಿ ಎಲ್ಲಿಯೂ ಬಸ್ ನಿಲ್ಲಿಸದೆ ನೇರವಾಗಿ ಗಾಡಿಕೊಪ್ಪದ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಗೆ ಬಸ್ ಚಲಾಯಿಸಿಕೊಂಡು ಹ
