Sunday, October 4, 2026
Sunday, October 4, 2026

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ – ಯುವ ರಂಗ ಕಲಾವಿದ ಸಾವು

Date:

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಯುವ ರಂಗ ಕಲಾವಿದ ಹಾಗೂ ಯೋಗಪಟು ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ ಹೊನ್ನಟ್ಟಿ ಹೊಸೂರು ಬಳಿ ನಡೆದಿದೆ.

ಮೃತರನ್ನು 28 ವರ್ಷದ ಹರ್ಷ ಎಂದು ಗುರುತಿಸಲಾಗಿದೆ.
ಗೋಣಿಬೀಡು ಸಮೀಪದ ಹೊನ್ನಟ್ಟಿ ಹೊಸೂರು ಬಳಿ ಅಪಘಾತ ಸಂಭವಿಸಿದೆ.

ಸಂಬಂಧಿಯೊಬ್ಬರನ್ನು ಭದ್ರಾವತಿಗೆ ಬಿಟ್ಟು ಬರಲು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಹರ್ಷ ಅವರ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಹರ್ಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಯೋಗಪಟು ಹಾಗೂ ರಂಗ ಕಲಾವಿದರಾಗಿ ಹರ್ಷ ಗುರುತಿಸಿಕೊಂಡಿದ್ದರು.
ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...