Tuesday, October 6, 2026
Tuesday, October 6, 2026

ವೈವಿಧ್ಯಮಯವಾಗಿ ಶಿವಮೊಗ್ಗ ದಸರಾ ಆಚರಣೆ: ವೇದಿಕೆ ನಿರ್ಮಾಣಕ್ಕೆ ಶಾಸಕ ಚೆನ್ನಿಯಿಂದ ಗುದ್ದಲಿ ಪೂಜೆ

Date:

ಮಲೆನಾಡಿನ ಸಾಂಸ್ಕೃತಿಕ ಕಿರೀಟ ಎಂದೇ ಖ್ಯಾತಿ ಪಡೆದಿರುವ ಶಿವಮೊಗ್ಗ ದಸರಾ ಮಹೋತ್ಸವವನ್ನು ಈ ಬಾರಿ ಅತ್ಯಂತ ವೈವಿಧ್ಯಮಯವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳು ಆರಂಭಗೊಂಡಿವೆ.

ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ ದಸರಾ ಮಹೋತ್ಸವದ ಪ್ರಮುಖ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವೇದಿಕೆ ನಿರ್ಮಾಣಕ್ಕೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾರ್ವಜನಿಕರು ಆರಾಮದಾಯಕವಾಗಿ ವೀಕ್ಷಿಸಲು ಅನುಕೂಲವಾಗುವಂತೆ ವಿಶಾಲ ವೇದಿಕೆ, ಆಸನ ವ್ಯವಸ್ಥೆ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ನಿಗದಿತ ಅವಧಿಯೊಳಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ, ದಸರಾ ಮಹೋತ್ಸವಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಪ್ರಭಾಕರ್ ಪಿ. ಸೇರಿದಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...