Wednesday, October 7, 2026
Wednesday, October 7, 2026

ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಆಹ್ವಾನ

Date:

ಶಿವಮೊಗ್ಗ ತಾಲೂಕು ಮೆಸ್ಕಾಂ ಗ್ರಾಮೀಣ ಉಪವಿಭಾಗದ ವ್ಯಾಪ್ತಿಗೆ ಒಳಪಡುವ ಪ.ಜಾತಿ/ಪ.ಪಂಗಡಕ್ಕೆ ಸೇರಿರುವ ರೈತರು
ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ 2026-27ನೇ ಸಾಲಿಗೆ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.
ಮುಂದಿನ 30 ದಿನಗಳ ಒಳಗಾಗಿ, ಅಂದರೆ ನವೆಂಬರ್ 06 ರ ಒಳಗೆ ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಲ್ಲಿ ಮುದ್ದಾಂ ಆಗಿ ಅರ್ಜಿ ಸಲ್ಲಿಸಬಹುದಾಗಿದ್ದು,
ಇತ್ತೀಚಿನ ಪಹಣಿ ಪ್ರತಿ , ಇತ್ತೀಚಿನ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ
ಬೋರ್‌ವೆಲ್‌ನ ಜಿಪಿಎಸ್ ಫೋಟೋ (ಫಲಾನುಭವಿ ಬೋರ್‌ವೆಲ್ ಪಕ್ಕದಲ್ಲಿ ನಿಂತಿರುವ ಚಿತ್ರ), ರೇಷನ್ ಕಾರ್ಡ್ ಪ್ರತಿ (ಬಿಪಿಎಲ್)
ಆದಾಯ ಪ್ರಮಾಣ ಪತ್ರ ಪ್ರತಿ,ಪಾಸ್‌ಪೋರ್ಟ್ ಅಳತೆಯ ಫೋಟೋ 02 ಲಗತ್ತಿಸಬೇಕು.
ಸಲ್ಲಿಕೆಯಾದ ಅರ್ಜಿಗಳನ್ನು ಸರ್ಕಾರದ ಮಾನದಂಡಗಳು, ಮೆಸ್ಕಾಂ ನಿಗಮದ ತಾಂತ್ರಿಕ ಸಾಧ್ಯತೆ ಹಾಗೂ ಜಂಟಿ ಇಲಾಖಾ ಆಯ್ಕೆ ಸಮಿತಿಯ ಅನುಮೋದನೆಯ ಮೇರೆಗೆ ಆದ್ಯತೆಯ ಆಧಾರದಲ್ಲಿ ವಿದ್ಯುತ್ ಸಂಪರ್ಕ ಒದಗಿಸಲಾಗುವುದು.
ಉದ್ದೇಶಿತ ಪಂಪ್‌ಸೆಟ್ ಇರುವ ಸರ್ವೆ ನಂಬರ್ ಜಮೀನಿನಲ್ಲಿ ಈ ಹಿಂದೆ ಗಂಗಾ ಕಲ್ಯಾಣ, ಎಸ್‌ಸಿಪಿ/ಟಿಎಸ್‌ಪಿ ಅಥವಾ ಸರ್ಕಾರದ ಯಾವುದೇ ಯೋಜನೆಯಡಿ ವಿದ್ಯುತ್ ಸಂಪರ್ಕ ಪಡೆಯದಿರುವ ಫಲಾನುಭವಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಗ್ರಾಮೀಣ ಉಪವಿಭಾಗ ಮೆಸ್ಕಾಂ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ. 

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...