ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಸುವ ಅವಧಿಯನ್ನು ಅ. 31ರವರೆಗೆ ವಿಸ್ತರಿಸಲಾಗಿದೆ.
ಅರ್ಜಿಯನ್ನು ವೆಬ್‌ಸೈಟ್https://ssp.postmatric.karnataka.gov.in ಮೂಲಕ ದಿ: 31/10/2026 ರೊಳಗಾಗಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ: 8050770004, ಇ-ಮೇಲ್ bcwdhelpline@gmail.com ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in ಅಥವಾ ದೂ.ಸಂ: 1902 ಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ-ಸಹಾಯ ಯೋಜನೆ ; ಅರ್ಜಿ ಅವಧಿ ವಿಸ್ತರಣೆ
Date:
