ಕರ್ನಾಟಕ ರಾಜ್ಯ ಅರಣ್ಯ ಇಲಾಖೆ, ಸಾಗರ ವತಿಯಿಂದ ಅಕ್ಟೋಬರ್ 3ರಂದು ಆಯೋಜಿಸಲಾಗಿದ್ದ ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಡಿಯಲ್ಲಿ ನಡೆಯುತ್ತಿರುವ ಡಾ. ನಾರೀಬೋಲಿ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ವಿಜೇತರಾಗಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಸ್ಪರ್ಧೆಯಲ್ಲಿ ವಿಜೇತರಾದ ಪ್ರಶಿಕ್ಷಣಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಹಾಗೂ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಬಹುಮಾನ ವಿತರಿಸಿ ಅಭಿನಂದಿಸಿದರು.
ವನ್ಯಜೀವಿ ಸಂರಕ್ಷಣೆ, ಪರಿಸರದ ಮಹತ್ವ ಹಾಗೂ ಜೀವ ವೈವಿಧ್ಯತೆಯ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಈ ಸ್ಪರ್ಧೆಯಲ್ಲಿ ಪ್ರಶಿಕ್ಷಣಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಬಹುಮಾನ ಪಡೆದಿರುವುದು ಮಹಾವಿದ್ಯಾಲಯಕ್ಕೆ ಹೆಮ್ಮೆಯ ಸಂಗತಿಯಾಗಿದೆ.
ವಿಜೇತ ಪ್ರಶಿಕ್ಷಣಾರ್ಥಿಗಳನ್ನು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಅಭಿನಂದಿಸಿ, ಅವರ ಮುಂದಿನ ಶೈಕ್ಷಣಿಕ ಸಾಧನೆಗಳಿಗೆ ಶುಭ ಹಾರೈಸಿದರು.
