ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2023ನೇ ಸಾಲಿನಲ್ಲಿ ಮುದ್ರಣಗೊಂಡು, ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನ ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕಲ್ಪಿಸಿದೆ.
ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಸಾರ್ವಜನಿಕ ಪ್ರದರ್ಶನವನ್ನು ಅಕ್ಟೋಬರ್ 12 ರಿಂದ 14 ರವರೆಗೆ ಬೆಳಿಗ್ಗೆ 10:00 ರಿಂದ ಸಂಜೆ 5:30 ರವರೆಗೆ ಬೆಂಗಳೂರಿನ ವಿಜಯನಗರದಲ್ಲಿರುವ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹತ್ತಿರದ ‘ಡಾ. ವಿಷ್ಣುವರ್ಧನ ಸ್ಮಾರಕ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ’ದ ನೆಲ ಮಹಡಿಯಲ್ಲಿರುವ ಗ್ರಂಥಾಲಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಪುಸ್ತಕ ಆಯ್ಕೆಗೆ ಸಂಬಂಧಿಸಿದಂತೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅಕ್ಟೋಬರ್ 12 ರಿಂದ 22 ರವರೆಗೆ ಬೆಳಿಗ್ಗೆ 10:00 ರಿಂದ ಸಂಜೆ 5:30 ರ ಒಳಗಾಗಿ ಲಿಖಿತ ಮನವಿಗಳನ್ನು ‘ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4 ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು – 560001′ ಇಲ್ಲಿಗೆ ಸಲ್ಲಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಶಿವಮೊಗ್ಗ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಹರೀಶ ಎಂ.ಆರ್. ತಿಳಿಸಿದ್ದಾರೆ.
2023ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ: ಪ್ರದರ್ಶನ ಹಾಗೂ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
Date:
