Sunday, November 22, 2026
Sunday, November 22, 2026

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

Date:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ / ಸ್ಥಾನಿಕ ಸಂಪಾದಕರ / ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ “ಸೇವಾ ಸಿಂಧು” ಪೋರ್ಟಲ್ https://sevasindhu.karnataka.gov.in ಮೂಲಕ ಸಮೀಪದ ಗ್ರಾಮ-1 ಕೇಂದ್ರದಲ್ಲಿ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ. ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.
ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಸುದ್ದಿ ಸಂಗ್ರಹಿಸಲು ಅನುಕೂಲ ಕಲ್ಪಿಸಲು ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಉಚಿತ ಬಸ್ ಪಾಸ್ ಗಳನ್ನು ನೀಡುತ್ತಿದೆ.
ರಾಜ್ಯದ ಎಲ್ಲಾ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಗ್ರಾಮ-1 ಕೇಂದ್ತದ ಮೂಲಕ 2026 ರ ಅಕ್ಟೋಬರ್ 31 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ.ಎನ್.ಅನುಚೇತ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕುಮಾರ ವ್ಯಾಸ ..ನಾನು ಕಂಡಂತೆ ಲೇ: ಪ್ರಸಾದ್ ಶ್ರೀವತ್ಸ, ದಾವಣಗೆರೆ

“ಕುಮಾರ ವ್ಯಾಸನು ಹಾಡಿದನೆಂದರೆಕಲಿಯುಗ ದ್ವಾಪರವಾಗುವುದುಭಾರತ ಕಣ್ಣಲಿ ಕುಣಿವುದು! ಮೈಯಲಿಮಿಂಚಿನ ಹೊಳೆ ತುಳುಕಾಡುವುದು!“ ಕುಮಾರವ್ಯಾಸನ...

Klive Editorial ಶಿವಮೊಗ್ಗ ಏರ್ ಪೋರ್ಟ್: ಕೇಂದ್ರಕ್ಕೆ ವಹಿಸಿ ಕೈತೊಳೆದು ಕೊಳ್ಳುವುದೇ ಕ್ಷೇಮ

Klive Editorial ಬಹಳ ಪ್ರಮುಖ ವಿಚಾರವೀಗ ಬಿಸಿಬಿಸಿ ಚರ್ಚೆಯ ಬಿಂದುವಾಗಿದೆ.ಶಿವಮೊಗ್ಗೆಗೆ ವಿಮಾನ...

Shivamogga Karnataka Sangha ವಿದ್ವಾನ್ ಜಿ.ಎಸ್. ನಟೇಶ್ ಅವರಿಗೆ ಕರ್ನಾಟಕ ಸಂಘದ ಪ್ರತಿಷ್ಠಿತ “ನವಿಲುಗರಿ” ಪುರಸ್ಕಾರ ನೀಡಿಕೆ ಸಮಾರಂಭ

Shivamogga Karnataka Sangha ಶಿವಮೊಗ್ಗ ಕರ್ನಾಟಕ ಸಂಘವು ಕನ್ನಡ ರಾಜ್ಯೋತ್ಸವದ ಅಂಗವಾಗಿ...