Saturday, October 10, 2026
Saturday, October 10, 2026

ಅಕ್ಟೋಬರ್ -2026ರ ಮಾಹೆಯ ಪಡಿತರ ಅಕ್ಕಿ ವಿತರಣೆ

Date:

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪಡಿತರ ಯೋಜನೆಯಡಿ 2026ರ ಅಕ್ಟೋಬರ್ ಮಾಹೆಯ ಅಕ್ಕಿ ಮತ್ತು ರಾಗಿ ಉಚಿತವಾಗಿ ವಿತರಣೆ ಮಾಡಲು ಸರ್ಕಾರವು ಆದೇಶಿಸಿದೆ.
ಅಂತ್ಯೋದಯ ಅನ್ನ ಯೋಜನೆಯಡಿ ಪಡಿತರ ಚೀಟಿಗೆ 14 ಕೆಜಿ ಅಕ್ಕಿ ಮತ್ತು 21 ಕೆಜಿ ರಾಗಿಯನ್ನು ನೀಡಲಾಗುವುದು. ಆದ್ಯತಾ ವಲಯದ ಕೇಂದ್ರ ಪಡಿತರ ಚೀಟಿಗೆ ಪ್ರತಿ ಸದಸ್ಯರಿಗೆ 02 ಕೆ.ಜಿ. ಅಕ್ಕಿ ಮತ್ತು 03 ಕೆಜಿ ರಾಗಿಯನ್ನು ನೀಡಲಾಗುವುದು. ಆದ್ಯತಾ ವಲಯದ ರಾಜ್ಯ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡಲಾಗುವುದು. ಅನ್ನಭಾಗ್ಯ ಯೋಜನೆಯ ಅಂತ್ಯೋದಯ ಅನ್ನ ಯೋಜನೆಯಡಿ 4 ಸದಸ್ಯರ ಮೇಲ್ಪಟ್ಟು ಪ್ರತಿ ಸದಸ್ಯರಿಗೆ 05 ಕೆಜಿ ಅಕ್ಕಿ ನೀಡಲಾಗುವುದು. ಆದ್ಯತಾ ವಲಯದ ಅನ್ನಭಾಗ್ಯ ಯೋಜನೆ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ 05 ಕೆಜಿ ಅಕ್ಕಿಯನ್ನು ನೀಡಲಾಗುವುದು
ಪಡಿತರ ಚೀಟಿದಾರರು ಆಹಾರ ಧಾನ್ಯವನ್ನು ಪಡೆಯುವಾಗ ಕಡ್ಡಾಯವಾಗಿ ಬಯೋ ನೀಡಿ ಪಡಿತರ ಪಡೆಯುವುದು. ಪ್ರತಿ ದಿನ ಬೆಳಗ್ಗೆ 6.00 ರಿಂದ ರಾತ್ರಿ 10.00ರವರೆಗೆ ಪಡಿತರ ವಿತರಣೆಗೆ ಸರ್ವರ್ ಲಭ್ಯಗೊಳಿಸಿರುವುದರಿಂದ ನ್ಯಾಯಬೆಲೆ ಅಂಗಡಿಗೆ ತೆರಳಿ ಬಯೋ ನೀಡಿ ಪಡಿತರ ಪಡೆಯುವುದು. ಪಡಿತರ ವಿತರಣೆ ಸಂಬಂಧ ಯಾವುದೇ ದೂರುಗಳಿದ್ದಲ್ಲಿ ಕೇಂದ್ರ ಸಹಾಯವಾಣಿ 1967 ಕ್ಕೆ ಕರೆ ಮಾಡಿ ಅಥವಾ ಹತ್ತಿರದ ಆಹಾರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...