Saturday, October 10, 2026
Saturday, October 10, 2026

ಶಿಕ್ಷಕರು ಸ್ಕೌಟ್ಸ್‌ ಮತ್ತು ಗೈಡ್ಸ್‌ ಚಳವಳಿಯ ಬಗ್ಗೆ ಮಾಹಿತಿ ಪಡೆದು ಮಕ್ಕಳಿಗೆ ತಿಳಿಸಬೇಕು: ಶಕುಂತಲಾ ಚಂದ್ರಶೇಖರ್

Date:

ಸ್ಕೌಟ್ಸ್‌ ಮತ್ತು ಗೈಡ್ಸ್‌ ಸೇವೆ ಮನೆಮನೆಗೂ ತಲುಪಬೇಕು. ಶಿಕ್ಷಕರು ಈ ಚಳವಳಿಯ ಉದ್ದೇಶ, ಮಹತ್ವ ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆ ಅಗತ್ಯ ಮಾಹಿತಿ ಪಡೆದು, ಮಕ್ಕಳಿಗೆ ಶಿಕ್ಷಣದ ಜೊತೆಗೆ ಸೇವಾ ಮನೋಭಾವವನ್ನೂ ಬೆಳೆಸಬೇಕು ಎಂದು ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್‌ ಶಿವಮೊಗ್ಗದ ಪ್ರಧಾನ ಆಯುಕ್ತರಾದ ಶ್ರೀಮತಿ ಶಕುಂತಲಾ ಚಂದ್ರಶೇಖರ್ ಹೇಳಿದರು.

ಶಾಲೆಗಳ ಸ್ಕೌಟ್ ಮಾಸ್ಟರ್‌ ಮತ್ತು ಗೈಡ್ ಕ್ಯಾಪ್ಟನ್‌ಗಳಿಗಾಗಿ ಆಯೋಜಿಸಿದ್ದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ಕೌಟ್ಸ್‌ ಮತ್ತು ಗೈಡ್ಸ್‌ ಚಳವಳಿಯು ಮಕ್ಕಳಲ್ಲಿ ಜೀವನ ಕೌಶಲ್ಯ, ಮನೋವಿಕಾಸ, ಶಿಸ್ತು, ನಾಯಕತ್ವದ ಗುಣ ಹಾಗೂ ಸಮಾಜಮುಖಿ ಚಿಂತನೆಗಳನ್ನು ಬೆಳೆಸಲು ಸಹಕಾರಿಯಾಗಿದೆ. ಈ ಚಳವಳಿಯ ಮೂಲಕ ವಿದ್ಯಾರ್ಥಿಗಳು ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಲು ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಪ್ರಪಂಚದಾದ್ಯಂತ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯು ಇಂದಿಗೂ ತನ್ನ ವಿಶಿಷ್ಟ ಕಾರ್ಯಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿದೆ. ಇದರ ಸೇವಾ ಕಾರ್ಯಗಳು ಹಾಗೂ ಉದ್ದೇಶಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಸಾರ್ವಜನಿಕರಿಗೆ ಪರಿಚಯಿಸುವುದು ಶಿಕ್ಷಕರು ಸೇರಿದಂತೆ ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಶಿಬಿರದ ನಾಯಕತ್ವ ವಹಿಸಿದ್ದ ಸಿ.ಎಂ. ಪರಮೇಶ್ವರಯ್ಯ ಅವರು ಮಾತನಾಡಿ, ಮಾನವೀಯ ಸೇವೆಗಳ ಮೂಲಕ ಜನಮನವನ್ನು ತಲುಪುತ್ತಿರುವ ಸ್ಕೌಟ್ಸ್‌ ಮತ್ತು ಗೈಡ್ಸ್‌ ಚಳವಳಿಯ ಕಾರ್ಯಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದು ಅಗತ್ಯವಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ಸೂಕ್ತ ತರಬೇತಿ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರು ತರಬೇತಿ ಪಡೆದು ಮಕ್ಕಳಿಗೆ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.

ಮಕ್ಕಳಲ್ಲಿ ಸೇವಾ ಮನೋಭಾವ, ನಾಯಕತ್ವ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಚಳವಳಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಸಂದೇಶವನ್ನು ಕಾರ್ಯಾಗಾರದಲ್ಲಿ ಒತ್ತಿ ಹೇಳಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ನ ಎಲ್ಲಾ ತಾಲ್ಲೂಕು ಶಿಕ್ಷಕ ಶಿಕ್ಷಕಿಯರು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಸಿ.ಎಂ.ಪರಮೇಶ್ವರಯ್ಯ, ರೋವರ್ಸ್ ಆಯುಕ್ತ ಕೆ.ರವಿ, ಗೈಡ್ಸ್ ಆಯುಕ್ತರು, ಜಿಲ್ಲಾ ಕಾರ್ಯದರ್ಶಿಗಳು, ಎಸ್ .ಜಿ.ಆನಂದ್, ಸಹ ಕಾರ್ಯದರ್ಶಿ ವೈ ಆರ್ ವೀರೇಶಪ್ಪ ಕೇಂದ್ರ ಸಾನಿಕ ಆಯುಕ್ತರನಾದ ಜಿ. ವಿಜಯ್ ಕುಮಾರ್, ಮಲ್ಲಿಕಾರ್ಜುನ್ ಕಾನೂರ್.ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...