ಶಿವಮೊಗ್ಗ ನಗರದ ಜೈಲ್ ರಸ್ತೆಯ ೩ನೇ ತಿರುವಿನಲ್ಲಿರುವ ಕಲ್ಪತರು ಶ್ರೀ ಚೌಡೇಶ್ವರಿ ಮತ್ತು ಪರಿವಾರ ನಾಗದೇವರುಗಳ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಅ.೧೧ರಿಂದ ೨೧ರವರೆಗೆ ಶರನ್ನವರಾತ್ರಿ ಮಹೋತ್ಸವ ಆಯೋಜಿಸಲಾಗಿದೆ.
ಮಹೋತ್ಸವದ ಅಂಗವಾಗಿ ಪ್ರತಿದಿನ ಬೆಳಿಗ್ಗೆ ಶ್ರೀದೇವಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಹಾಗೂ ಮಹಾಮಂಗಳಾರತಿ ನಡೆಯಲಿದೆ. ಸಂಜೆ ೬.೩೦ಕ್ಕೆ ಭಜನೆ, ೭.೩೦ರಿಂದ ಸೇವಾ ಕಾರ್ಯಕ್ರಮಗಳು ಹಾಗೂ ರಾತ್ರಿ ೮.೩೦ಕ್ಕೆ ಮಹಾಮಂಗಳಾರತಿ ನೆರವೇರಿಸಿ ತೀರ್ಥಪ್ರಸಾದ ವಿತರಿಸಲಾಗುವುದು.
ಅ.೧೩ರಂದು ಮಂಗಳವಾರ ಸಂಜೆ ಶ್ರೀ ಮಂಜುನಾಥ ಹರಿದಾಸರಿಂದ ದೇವಿ ಮಹಾತ್ಮೆ ಪ್ರಸಂಗ ನಡೆಯಲಿದೆ. ಅ.೧೫ರಂದು ಗುರುವಾರ ದುರ್ಗಾ ಸಪ್ತಶತಿ ಪಾರಾಯಣ ಹಾಗೂ ಅ.೧೬ರಂದು ಶುಕ್ರವಾರ ಸಾಮೂಹಿಕ ಲಲಿತಾ ಸಹಸ್ರನಾಮ ಕುಂಕುಮಾರ್ಚನೆ ಆಯೋಜಿಸಲಾಗಿದೆ.
ಅ.೧೭ರಂದು ಶನಿವಾರ ಸಂಜೆ ಶಿವಮೊಗ್ಗದ ಗೌರಿ ಕಲಾ ಕೇಂದ್ರದ ವಿದುಷಿ ಕವಿತಾರಾಣಿ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ.
ಅ.೧೮ರಂದು ಭಾನುವಾರ ಭಕ್ತಾದಿಗಳ ಶ್ರೇಯೋಭಿವೃದ್ಧಿಗಾಗಿ ಸಾಮೂಹಿಕ ಚಂಡಿಕಾಯಾಗ ನೆರವೇರಿಸಲಾಗುವುದು. ಬೆಳಿಗ್ಗೆ ೯.೩೦ಕ್ಕೆ ಹೋಮ ಆರಂಭವಾಗಲಿದ್ದು, ಮಧ್ಯಾಹ್ನ ೧ ಗಂಟೆಗೆ ಮಹಾಪೂರ್ಣಾಹುತಿ ಹಾಗೂ ಮಹಾಮಂಗಳಾರತಿ ನಡೆಯಲಿದೆ. ಬಳಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಅ.೨೧ರಂದು ಬುಧವಾರ ಸಂಜೆ ಬನ್ನಿ ಮುಡಿಯುವ ಕಾರ್ಯಕ್ರಮ, ರಾಜಬೀದಿ ಪಲ್ಲಕ್ಕಿ ಉತ್ಸವ, ರಾಜೋಪಚಾರ ಪೂಜೆ ಹಾಗೂ ಮಹಾಮಂಗಳಾರತಿ ನಡೆಯಲಿದೆ. ನಂತರ ಭಕ್ತರಿಗೆ ತೀರ್ಥಪ್ರಸಾದ ವಿತರಿಸಲಾಗುವುದು.
ಮಹೋತ್ಸವದ ಎಲ್ಲ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಕುಟುಂಬ ಸಮೇತರಾಗಿ ಭಾಗವಹಿಸಿ ಶ್ರೀ ಚೌಡೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನ ಸೇವಾ ಸಮಿತಿಯ ಕಾರ್ಯಕಾರಿ ಮಂಡಳಿ ಮನವಿ ಮಾಡಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ : ೯೭೩೧೦೧೨೪೨೫/ ೮೬೧೮೨೦೮೭೫೬) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಅ. ೧೧ರಿಂದ ೨೧ರವರೆಗೆ ಕಲ್ಪತರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ
Date:
