Monday, October 12, 2026
Monday, October 12, 2026

ಸಾಗರ ಸನಿಹದ ಆಲಳ್ಳಿ ಗ್ರಾಮದ ಕೆರೆಯಲ್ಲಿ ಈರ್ವರು ಬಾಲಕರು ಮುಳುಗಿ ದಾರುಣ ಸಾವು

Date:

ಸಾಗರ ತಾಲ್ಲೂಕಿನಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ದಸರಾ ರಜೆ ಆರಂಭದಲ್ಲೇ ನಡೆದ ಈ ದುರ್ಘಟನೆ ಎರಡು ಕುಟುಂಬಗಳಲ್ಲಿ ಶೋಕದ ಛಾಯೆ ಮೂಡಿಸಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆಲಳ್ಳಿ ಗ್ರಾಮದ ಹೊಸಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ಮನೆಯಿದ ಆಟವಾಡಲು ಹೊರಟಿದ್ದ ಮುಳುಕೇರಿ ಗ್ರಾಮದ ಷಣ್ಮುಖ ಅವರ ಪುತ್ರ ಲೇಖನ್ (13) ಹಾಗೂ ಆಲಳ್ಳಿ ಗ್ರಾಮದ ಗಣೇಶ್ ಅವರ ಪುತ್ರ ಪುನೀತ್ (11) ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಇಬ್ಬರೂ ಮೃತಪಟ್ಟಿದ್ದಾರೆ.

ಮೃತ ಬಾಲಕರು ಹತ್ತಿರದ ಸಂಬಂಧಿಗಳಾಗಿದ್ದು, ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ದಸರಾ ರಜೆ ಆರಂಭದಲ್ಲೇ ಸಂಭವಿಸಿದ ಈ ದುರಂತದಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಘಟನೆಗೆ ಸಂಬಂಧಿಸಿದಂತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...