Tuesday, October 13, 2026
Tuesday, October 13, 2026

ಕೇಂದ್ರ ಸಚಿವ ಸೋಮಣ್ಣ ಅವರ ಕಾರಿಗೆ ಅಡ್ಡಗಟ್ಟಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ

Date:

ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರ ಕಾರಿಗೆ ಮುತ್ತಿಗೆ ಹಾಕಿ, ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ಶಿವಮೊಗ್ಗದ ಬಸ್ ನಿಲ್ದಾಣದ ಸಮೀಪದ ಬಿಹೆಚ್ ರಸ್ತೆಯಲ್ಲಿ ನಡೆದಿದೆ.

ಯೂತ್ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಹಾಗೂ ಮತಗಳ್ಳತನವಾಗಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ, ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿದರು.

ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟರು. ಘಟನೆಯಿಂದಾಗಿ ಬಿಹೆಚ್ ರಸ್ತೆಯ ಸುತ್ತಮುತ್ತ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...