Wednesday, October 14, 2026
Wednesday, October 14, 2026

ವಿಧಾನಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ

Date:

ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮದ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಿರುವ ವಿಜಯ ಜ್ಯೋತಿ ಯಾತ್ರೆಗೆ, ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ವಿಧಾನಸೌಧದ ಪೂರ್ವ ದ್ವಾರದ ಭವ್ಯ ಮೆಟ್ಟಿಲುಗಳ ಮುಂಭಾಗದ ಬಳಿ ಚಾಲನೆ ನೀಡಿದರು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಬೆಳಗಾವಿ ಜಿಲ್ಲಾ ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಅಕ್ಟೋಬರ್ 23ರಿಂದ 25ರವರೆಗೆ ನಡೆಯಲಿರುವ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವದ ಅಂಗವಾಗಿ ಈ ವಿಜಯ ಜ್ಯೋತಿ ಯಾತ್ರೆಯನ್ನು ಆಯೋಜಿಸಲಾಗಿದ್ದು, ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಮತ್ತು ಸ್ವಾಭಿಮಾನದ ಪ್ರತೀಕವಾಗಿ ಹೊರಹೊಮ್ಮಿದ ರಾಣಿ ಚೆನ್ನಮ್ಮ ಅವರ ಐತಿಹಾಸಿಕ ಹೋರಾಟವನ್ನು ಸ್ಮರಿಸುವುದು ಹಾಗೂ ಅವರ ಆದರ್ಶಗಳನ್ನು ಜನರಿಗೆ ಪರಿಚಯಿಸುವುದು ಯಾತ್ರೆಯ ಪ್ರಮುಖ ಉದ್ದೇಶವಾಗಿದೆ.

ಕಾರ್ಯಕ್ರಮದಲ್ಲಿ ಶಾಸಕ ಬಾಬಾಸಾಹೇಬ್ ಪಾಟೀಲ್, ಕಲಮಠದ ಮಡಿವಾಳ ರಾಜೇಂದ್ರ ಸ್ವಾಮೀಜಿ ಹಾಗೂ ಪಂಚಾಕ್ಷರಿ ಮಹಾಸ್ವಾಮಿಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಬಿಜ್ಜರಗಿಯ ಸಾಂಸ್ಕೃತಿಕ ಹಾಗೂ ಜಾನಪದ ಕಲಾ ತಂಡಗಳು ತಮ್ಮ ಕಲಾ ಪ್ರದರ್ಶನದ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದವು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...