ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ನಗರದಲ್ಲಿ ಅ.15 ರಂದು ರೈತ ದಸರಾ ಹಮ್ಮಿಕೊಂಡಿದ್ದು, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 9 ಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜ್, ಸೈನ್ಸ್ ಮೈದಾನ, ಬಿ.ಹೆಚ್.ರಸ್ತೆಯಲ್ಲಿ ರೈತ ದಸರಾ ಪ್ರಯುಕ್ತ ಅಲಂಕೃತ ಎತ್ತಿನಗಾಡಿ/ಟ್ರ್ಯಾಕ್ಟರ್/ಟಿಲ್ಲರ್ ಮೂಲಕ ಜಾಥಾ ಕಾರ್ಯಕ್ರಮ ಆಯೋಜಿಸಿದ್ದು, ಶಿವಮೊಗ್ಗ ಜಿಲ್ಲೆಯ ಪ್ರಗತಿಪರ ರೈತ ಮಹಿಳೆ ಆಶಾರಾಣಿ ಸಿ.ಎಸ್. ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11 ಕ್ಕೆ ಕುವೆಂಪು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಕೃಷಿ ಬಗ್ಗೆ ಉಪನ್ಯಾಸ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲೆಯ ಪ್ರಗತಿಪರ ರೈತ ಹಾಗೂ ಉದಯೋನ್ಮುಖ ಕೃಷಿ ಪಂಡಿತ ಪ್ರಶಸ್ತಿ ವಿಜೇತರಾದ ದಯಾನಂದ ಎಸ್.ಎಂ.ರವರು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿರವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.
ರೈತ ದಸರಾ: ವಿವಿಧ ಕಾರ್ಯಕ್ರಮ ಆಯೋಜನೆ
Date:
