Friday, October 16, 2026
Friday, October 16, 2026

ಮಹಿಳೆ, ಎಲ್ಲ ಕ್ಷೇತ್ರಗಳಲ್ಲೂ ಪುರುಷರಿಗೆ ಸಮಾನಳಾಗಿ ಸಾಧನೆ ಮಾಡುತ್ತಿದ್ದಾಳೆ : ಅನಿತಾ ಮಧು ಬಂಗಾರಪ್ಪ

Date:

ಕೆಟ್ಟದರ ಮೇಲೆ ಒಳಿತಿನ ಜಯ, ಅಧರ್ಮದ ವಿರುದ್ಧ ಧರ್ಮದ ವಿಜಯವೇ ದಸರಾ ಎಂದು ದಸರಾ ಉತ್ಸವ ಮಹಿಳಾ ಸಮಿತಿ ಅಧ್ಯಕ್ಷೆ ಅನಿತಾ ಮಧುಬಂಗಾರಪ್ಪ ಹೇಳಿದರು.
ಸೊರಬ ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಆವರಣದಲ್ಲಿ ದಸರಾ ಉತ್ಸವ ಸಮಿತಿ ವತಿಯಿಂದ ತಾಲೂಕು ಆಡಳಿತ ಹಾಗೂ ಪುರಸಭೆ ಸಹಕಾರದೊಂದಿಗೆ ಬುಧವಾರ ಸಂಜೆ ಹಮ್ಮಿಕೊಂಡ ೧೮ನೇ ವರ್ಷದ ಸಾರ್ವಜನಿಕ ದಸರಾ ಉತ್ಸವದಲ್ಲಿ ನಾಲ್ಕನೇ ದಿನದ ಕಾರ್ಯಕ್ರಮ ‘ಮಹಿಳಾ ದಸರಾ ಸೌರಭ’ ಉದ್ಘಾಟಿಸಿ ಅವರು ಮಾತನಾಡಿದರು.
ದಸರಾ ಶಕ್ತಿ ಮತ್ತು ಬೆಳಕಿನ ಹಬ್ಬವಾಗಿದ್ದು, ಧೈರ್ಯ ಮತ್ತು ಸಂಪತ್ತನ್ನು ನೀಡುತ್ತದೆ. ಮನೆಯ ನಾಲ್ಕು ಗೋಡೆಗಳ ನಡುವೆ ಮಾತ್ರ ಸೀಮಿತವಾಗಿದ್ದ ಮಹಿಳೆಯರು ಪುರುಷರಿಗೆ ಸಮಾನಳಾಗಿ ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ. ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಲಿ, ಯುವಕರಿಗೆ ಉತ್ತಮ ಭವಿಷ್ಯ ದೊರೆಯಲಿ, ಮಕ್ಕಳು ಸುಶಿಕ್ಷಿತರಾಗಲಿ ಎಂದು ಶ್ರೀ ದೇವಿಯಲ್ಲಿ ಪ್ರಾರ್ಥಿಸುತ್ತಾ, ಮಹಿಳೆಯರು ಸ್ವಾವಲಂಬಿ ಜೀವನದ ಕಡೆ ಗಮನ ನೀಡಬೇಕು ಎಂದು ತಿಳಿಸಿದರು.
ವೈದ್ಯೆ ಡಾ. ಸೌಭಾಗ್ಯ ಈರೇಶ್ ಗೌಡ ಮಾತನಾಡಿ, ದುಷ್ಟ ಶಕ್ತಿಗಳನ್ನು ಸಂಹಾರ ಮಾಡಿ ವಿಜಯ ಸಾಧಿಸಿದ ದಿನವೇ ವಿಜಯದಶಮಿ ಯಾಗಿದ್ದು, ಭಾರತೀಯ ಸಂಸ್ಕೃತಿಯಲ್ಲಿ ನಾಡಹಬ್ಬ ದಸರಾಗೆ ವಿಶಿಷ್ಟ ಸ್ಥಾನಮಾನವಿದೆ. ಮಹಿಳೆಯರು ಕುಟುಂಬ ನಿರ್ವಹಣೆ ಜೊತೆಗೆ ಮಾನಸಿಕ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು. ಒತ್ತಡದ ಬದುಕಿನಲ್ಲಿ ಸಕಾರಾತ್ಮಕ ಚಿಂತನೆಗಳಿAದ ಮಾನಸಿಕ ಆರೋಗ್ಯ ದೊರೆಯುತ್ತದೆ. ಶಕ್ತಿ ಮತ್ತು ಧೈರ್ಯವನ್ನು ಹೆಚ್ಚು ಮಾಡಿಕೊಂಡು ಸಹನೆ ಮತ್ತು ತಾಳ್ಮೆಯಿಂದ ಕುಟುಂಬ ನಿರ್ವಹಣೆ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿಆರೋಗ್ಯ ಕ್ಷೇತ್ರದಿಂದ ನಿವೃತ್ತ ಹಿರಿಯ ಆರೋಗ್ಯ ಸಹಾಯಕಿ ಎಚ್.ಎನ್. ಜಯಮ್ಮ ಅವರಿಗೆ ದಸರಾ ಉತ್ಸವ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ದಸರಾ ಉತ್ಸವ ಮಹಿಳಾ ಸಮಿತಿಯಿಂದ ಅನಿತಾ ಮಧು ಬಂಗಾರಪ್ಪ ಅವರನ್ನು ಗೌರವಿಸಲಾಯಿತು.
ಸಿಡಿಪಿಒ ಕಚೇರಿಯ ಮೇಲ್ವಿಚಾರಕಿ ಕೆ.ಜಿ. ನೇತ್ರಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಪುಷ್ಪಾ, ಕಾರ್ಯಕ್ರಮದ ಪ್ರಾಯೋಜಕರಾದ ಅಮ್ಮ ಕ್ಲೀನಿಕ್‌ನ ವೈದ್ಯೆ ಡಾ. ಸೌಭಾಗ್ಯ ಈರೇಶ್‌ಗೌಡ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕಿ ರತ್ನಮ್ಮ ಎಂ. ನಾಗಪ್ಪ, ಅಕ್ಕನ ಬಳಗದ ಪ್ರಧಾನ ಕಾರ್ಯದರ್ಶಿ ಜಯಮಾಲಾ ಅಣ್ಣಾಜಿಗೌಡ, ಜಿಪಂ ಮಾಜಿ ಸದಸ್ಯೆ ಕೆ.ಜಿ. ಲೋಲಾಕ್ಷಮ್ಮ, ಗೀತಾ ಶಿವಾನಂದ್ ಅವರಿಗೆ ದಸರಾ ಮಹಿಳಾ ಸಮಿತಿಯಿಂದ ಅಭಿನಂದಿಸಲಾಯಿತು.
ದಸರಾ ಉತ್ಸವ ಮಹಿಳಾ ಸಮಿತಿ ಅಧ್ಯಕ್ಷೆ ಸುಜಾತಾ ಜೋತಾಡಿ ಅಧ್ಯಕ್ಷತೆ ವಹಿಸಿದ್ದರು. ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ವೀಣಕ್ಕ, ಚೇತನಕ್ಕ, ಪ್ರಮುಖರಾದ ಪಪಂ ಮಾಜಿ ಅಧ್ಯಕ್ಷೆ ವಿಜಯ ಮಹಾಲಿಂಗಪ್ಪ, ಪುರಸಭೆ ಮಾಜಿ ಸದಸ್ಯೆ ಪ್ರೇಮಾ ಟೋಕಪ್ಪ, ಅಕ್ಕನ ಬಳಗದ ಅಧ್ಯಕ್ಷೆ ರೇಖಾ ಜಗದೀಶ್, ಸರಸ್ವತಿ ನಾವುಡಾ, ಪುಷ್ಪಾ ವಿಶ್ವನಾಥ್ ಸೇರಿದಂತೆ ಇತರರಿದ್ದರು. ಪ್ರತಿಭಾ ಗಣೇಶ್ ಭಟ್ ಪ್ರಾರ್ಥಿಸಿದರು. ಅನುಕೃತ ಸ್ವಾಗತಿಸಿ, ಪೂರ್ಣಿಮಾ ಭಾವೆ ವಂದಿಸಿದರು. ಗಾಯತ್ರಿ ಗೋಖಲೆ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...