Saturday, October 17, 2026
Saturday, October 17, 2026

ವ್ಯಕ್ತಿಯನ್ನು ಮಾನಸಿಕ ಸದೃಢಗೊಳಿಸುವಲ್ಲಿ ಪುಸ್ತಕಗಳದ್ದು ಮಹತ್ವದ ಪಾತ್ರ- ಆರ್.ಕೆ.ರಾಜು

Date:

ಪುಸ್ತಕಗಳು ವ್ಯಕ್ತಿತ್ವ ವಿಕಸನದ ದೀವಿಗೆಯಾಗಬೇಕು. ವ್ಯಕ್ತಿಯನ್ನು ಮಾನಸಿಕವಾಗಿ ಸದೃಢಗೊಳಿಸುವಲ್ಲಿ ಪುಸ್ತಕಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಾಜು ಆರ್.ಕೆ. ತಿಳಿಸಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅ.15ರಂದು ಐಕ್ಯೂಎಸಿ, ಕನ್ನಡ ವಿಭಾಗ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ನನ್ನ ಮೆಚ್ಚಿನ ಪುಸ್ತಕ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ 16ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಮೆಚ್ಚಿನ ಪುಸ್ತಕಗಳನ್ನು ಪರಿಚಯಿಸಿ, ಅವುಗಳ ಮಹತ್ವ ಹಾಗೂ ತಮ್ಮ ಮೇಲೆ ಬೀರಿದ ಪ್ರಭಾವದ ಕುರಿತು ವಿವರಿಸಿದರು.

ಕಾರ್ಯಕ್ರಮದ ಅತಿಥಿಯಾಗಿದ್ದ ನಿರ್ವಹಣಾ ಶಾಸ್ತ್ರದ ಪ್ರಾಧ್ಯಾಪಕ ಡಾ. ರವೀಶ್ ಎನ್.ಎಸ್. ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕಗಳನ್ನು ಪ್ರೀತಿಸುವ ಹಾಗೂ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಚಾಟ್‌ಜಿಪಿಟಿಯಂತಹ ಆ್ಯಪ್‌ಗಳ ಬಳಕೆಯಿಂದ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.

ತಮ್ಮ ಮೆಚ್ಚಿನ ಪುಸ್ತಕವನ್ನು ಉತ್ತಮವಾಗಿ ಪರಿಚಯಿಸಿದ ಮೂವರು ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು.

ತೀರ್ಪುಗಾರರಾಗಿ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ನಯನ ಎಚ್., ಕನ್ನಡ ವಿಭಾಗದ ಉಪನ್ಯಾಸಕ ಡಾ. ಶಿವಾಜಿರಾವ್ ಕೆ. ಹಾಗೂ ನಂದಿನಿ ಎಲ್. ಕಾರ್ಯನಿರ್ವಹಿಸಿದರು. ಗ್ರಂಥಪಾಲಕ ರಾಜು ನಾಯ್ಕ್ ಎಸ್. ಸ್ವಾಗತಿಸಿದರು. ನಮ್ರತಾ ಮತ್ತು ತಂಡ ಪ್ರಾರ್ಥಿಸಿದರು. ಕಾವ್ಯ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಕುಮಾರ ಎಂ. ಮುದ್ದಿನಕೊಪ್ಪ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...