Saturday, October 17, 2026
Saturday, October 17, 2026

ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆ, ನಿಯಮಾನುಸಾರ ಶಿಷ್ಟಾಚಾರ ಪಾಲಿಸಿ – ಪ್ರಭುಲಿಂಗ ಕವಳಿಕಟ್ಟಿ

Date:

ನವೆಂಬರ್ 1ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ, ಸಂಭ್ರಮದಿಂದ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಅಂದು ಬೆಳಿಗ್ಗೆ 8ಗಂಟೆಗೆ ನಗರದ ಸೈನ್ಸ್‌ ಮೈದಾನದಿಂದ ಹೊರಡುವ ಕನ್ನಡಾಂಬೆ ಹಾಗೂ ತಾಯಿ ಭುವನೇಶ್ವರಿಯ ಭಾವಚಿತ್ರದೊಂದಿಗೆ ಹೊರಡುವ ಭವ್ಯ ಮೆರವಣಿಗೆಯು ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ಕಲಾತಂಡಗಳೊಂದಿಗೆ ನಗರದ ಪ್ರಮುಖ ರಾಜಬೀದಿಗಳಲ್ಲಿ ಸಂಚರಿಸಿ, ಅಂತಿಮವಾಗಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಸಂಪನ್ನಗೊಳ್ಳಲಿದೆ ಎಂದರು.
ಕೃಷಿ, ತೋಟಗಾರಿಕೆ, ಅರಣ್ಯ, ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳು ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಐತಿಹಾಸಿಕ, ಸಾಂಸ್ಕೃತಿಕ, ಪ್ರವಾಸೋದ್ಯಮ ಹಾಗೂ ಮಲೆನಾಡಿನ ವೈಶಿಷ್ಟ್ಯಗಳನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರಗಳನ್ನು ಸೃಜಿಸುವಂತೆ ಸೂಚಿಸಿದ ಅವರು, ಭಾರತ್‌ ಜೋಡೋ ನೂತನ ಕಾರ್ಯಕ್ರಮ ಸೇರಿದಂತೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಮತ್ತು ಸರ್ಕಾರದ ಪ್ರಮುಖ ಯೋಜನೆಗಳನ್ನು ಬಿಂಬಿಸುವ ಸ್ತಬ್ಧಚಿತ್ರಗಳು ಇರುವಂತೆ ನೋಡಿಕೊಳ್ಳಲು ಸೂಚಿಸಿದರು.
ಜಿಲ್ಲೆಯ ಐತಿಹಾಸಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ವೈಶಿಷ್ಟ್ಯಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆದ್ಯತೆಯನ್ನಾಗಿ ಪರಿಗಣಿಸಲು ನಿರ್ಣಯಿಸಲಾಯಿತು. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳ ಅಧ್ಯಕ್ಷರು ಪದಾಧಿಕಾರಿಗಳು, ಕನ್ನಡ ಭಾಷಾಭಿಮಾನಿಗಳು, ಕಲಾತಂಡಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಕ್ರಿಯ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸುವಂತೆಯೂ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯೋತ್ಸವದ ಸಂಭ್ರಮಾಚರಣೆಯು ವರ್ಣರಂಜಿತವಾಗಿರುವಂತೆ ನೋಡಿಕೊಳ್ಳುವ ಹಿನ್ನೆಲೆಯಲ್ಲಿ ನಗರದಲ್ಲಿನ ಪ್ರಮುಖ ರಸ್ತೆ, ವೃತ್ತಗಳನ್ನು, ಇಲಾಖಾ ಕಚೇರಿ ಕಟ್ಟಡಗಳನ್ನು ವಿದ್ದುದ್ದೀಪಗಳಿಂದ ಅಲಂಕರಿಸುವಂತೆ ಸೂಚಿಸಿದ ಅವರು, ಅಂದು ಸಂಜೆ ನಗರದ ಕುವೆಂಪು ರಂಗಮಂದಿರದಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಮಹತ್ವ ಸಾರುವ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆಯೂ ಅಧಿಕಾರಿಗಳಿಗೆ ಸೂಚಿಸಿದರು.
• ಕನ್ನಡಪರ ಸಂಘಟನೆಗಳ ಪ್ರಮುಖರ ಸಭೆಗೆ ಆಹ್ವಾನ : ಜಿಲ್ಲಾಡಳಿತದ ವತಿಯಿಂದ ನವೆಂಬರ್‌ 01ರಂದು ಬೆಳಿಗ್ಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲು ಉದ್ದೇಶಿಸಿರುವ ಕನ್ನಡ ರಾಜ್ಯೋತ್ಸವವನ್ನು ಆಕರ್ಷಕವಾಗಿ ಆಯೋಜಿಸುವ ಸಂಬಂಧ ದಿ.19.10.2026ರಂದು ಬೆಳಿಗ್ಗೆ 10.30ಕ್ಕೆ ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಗರದ ಎಲ್ಲಾ ಕನ್ನಡಪರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆಯನ್ನು ಆಯೋಜಿಸಲಾಗಿದೆ. ಸ್ಥಳೀಯ ಸಂಘಟನೆಗಳ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಿ, ಕಾರ್ಯಕ್ರಮದ ಯಶಸ್ವಿಗೆ ತಮ್ಮ ಅಮೂಲ್ಯ ಸಲಹೆ-ಸಹಕಾರವನ್ನು ನೀಡುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಮನವಿ ಮಾಡಿದ್ದಾರೆ.
ಈ ಕಾರ್ಯಕ್ರಮಕ್ಕೆ ನಿಯಮಾನುಸಾರ ಜಿಲ್ಲಾ ಉಸ್ತುವಾರಿ ಸಚಿವರು, ಚುನಾಯಿತ ಜನಪ್ರತಿನಿಧಿಗಳು, ಗಣ್ಯರು ಹಾಗೂ ಅಧಿಕಾರಿಗಳನ್ನು ಆಹ್ವಾನಿಸಲಾಗುವುದು. ಈ ಕಾರ್ಯಕ್ರಮದ ವ್ಯವಸ್ಥಿತ ನಿರ್ವಹಣೆಗೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿಗಳನ್ನು ರಚಿಸಿ ಜವಾಬ್ದಾರಿ ನೀಡಲಾಗಿದೆ. ಕಾರ್ಯಕ್ರಮದ ವೇದಿಕೆ ಅಲಂಕಾರ, ಸ್ವಾಗತ ಕಮಾನುಗಳ ನಿರ್ಮಾಣ, ರಂಗೋಲಿ ಚಿತ್ತಾರ, ಹೂವಿನ ಕುಂಡಗಳ ಅಲಂಕಾರ, ಶಿಷ್ಟಾಚಾರದಂತೆ ಆಹ್ವಾನಿತರನ್ನು ಕರೆದು ಗೌರವಿಸುವ ಬಗ್ಗೆಯೂ ಜಿಲ್ಲಾಧಿಕಾರಿಗಳು ಚರ್ಚಿಸಿದರು.
ನಗರದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು, ಕಲಾತಂಡಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಕ್ರಿಯ ಭಾಗವಹಿಸುವಿಕೆಗೆ ಮನವಿ ಮಾಡಿದ ಅವರು, ಸಾರ್ವಜನಿಕರು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕೋರಿದರು.
ರಾಜ್ಯೋತ್ಸವದ ಯಶಸ್ಸಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ, ಕೈಗೊಂಡ ಸಿದ್ಧತೆಗಳ ಕುರಿತು ಪ್ರಗತಿ ವರದಿ ಸಲ್ಲಿಸಬೇಕು ಎಂದವರು ನುಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್‌ ವಿ. ಸೇರಿದಂತೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...