ಸೊರಬ ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಪ್ರಾಂಗಣದಲ್ಲಿ ದಸರಾ ಉತ್ಸವ ಸಮಿತಿ ವತಿಯಿಂದ ಪ್ರತಿಷ್ಠಾಪಿತ ಶ್ರೀ ದುರ್ಗಾದೇವಿ ಸನ್ನಿಧಿಗೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಅವರಿಗೆ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ರಂಗನಾಥ ದೇವಸ್ಥಾನದ ಪ್ರಧಾನ ಅರ್ಚಕ ನಾರಾಯಣ ಭಟ್ ಮರಾಠೆ, ದಸರಾ ಉತ್ಸವ ಸಮಿತಿ ಅಧ್ಯಕ್ಷ ಜಿ. ಪ್ರಶಾಂತ್ ಮೇಸ್ತ್ರಿ, ಪ್ರಧಾನ ಕಾರ್ಯದರ್ಶಿ ಪರಶುರಾಮ ಸಣ್ಣಬೈಲ್, ಆರ್ಥಿಕ ಸಮಿತಿ ಅಧ್ಯಕ್ಷ ಎಚ್. ಗಣಪತಿ ಹುಲ್ತಿಕೊಪ್ಪ, ಬಂದಗಿ ಬಸವರಾಜ ಶೇಟ್, ಎಂ.ಡಿ. ಶೇಖರ್, ಜಯಶೀಲಗೌಡ, ಕೆ.ವಿ.ಗೌಡ, ಸುಜಾತಾ ಜೋತಾಡಿ, ಅಣ್ಣಪ್ಪ ಹಾಲಘಟ್ಟ, ಮಂಜುನಾಥ ತುರುವೆಕೆರೆ, ಅತೀಕ್ ಉರ್ ರೆಹಮಾನ್ ಸೇರಿದಂತೆ ದಸರಾ ಉತ್ಸವ ಸಮಿತಿಯ ಪದಾಧಿಕಾರಿಗಳು, ಉಪಸಮಿತಿಯ ಅಧ್ಯಕ್ಷರು, ಇತರರಿದ್ದರು.
