ಶಿವಮೊಗ್ಗದಲ್ಲಿ ಅಪ್ರಾಪ್ತನಿಗೆ ಸ್ಕೂಟರ್ ನೀಡಿದ ವಾಹನದ ನೋಂದಾಯಿತ ಮಾಲೀಕರಿಗೆ ನ್ಯಾಯಾಲಯವು ₹26,500 ದಂಡ ವಿಧಿಸಿದೆ. ಮೋಟಾರು ವಾಹನ ಕಾಯ್ದೆಯ ಕಲಂ 199(2) ಅಡಿಯಲ್ಲಿ ಮಾಲೀಕರ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗದ 4ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ ನ್ಯಾಯಾಲಯ ದಂಡ ವಿಧಿಸಿ ಆದೇಶಿಸಿದೆ. ಅಪ್ರಾಪ್ತರ ಕೈಗೆ ವಾಹನ ನೀಡುವ ಮೂಲಕ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದು, ಪೋಷಕರು ಹಾಗೂ ವಾಹನ ಮಾಲೀಕರು ಜವಾಬ್ದಾರಿಯಿಂದ ವರ್ತಿಸುವಂತೆ ಮನವಿ ಮಾಡಿದ್ದಾರೆ.
ಅಪ್ರಾಪ್ತನಿಗೆ ಸ್ಕೂಟರ್ ನೀಡಿದ ಮಾಲೀಕರಿಗೆ ₹26,500 ದಂಡ
Date:
