S. N. Channabasappa ಮಲೆನಾಡಿನ ಸಾಂಸ್ಕೃತಿಕ ಹೆಗ್ಗುರುತಾದ ‘ಶಿವಮೊಗ್ಗ ನಾಡಹಬ್ಬ ದಸರಾ – 2026’ ಮಹೋತ್ಸವದ ಅಂಗವಾಗಿ, ಶಿವಮೊಗ್ಗ ನಗರದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ನಗರದ ಇತಿಹಾಸವನ್ನು ಸಾರುವ ವಿಶೇಷ ಲೇಸರ್ ಶೋ (Laser Show) ಪ್ರದರ್ಶನಕ್ಕೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಮಹಾನಗರ ಪಾಲಿಕೆ ಆವರಣದಲ್ಲಿ ನಿನ್ನೆ ಸಂಜೆ ವಿಧ್ಯುಕ್ತವಾಗಿ ಚಾಲನೆ ನೀಡಿದರು.
S. N. Channabasappa ಉದ್ಘಾಟನೆಯ ಬಳಿಕ ಮಾತನಾಡಿದ ಶಾಸಕರು, “ನಾಡಹಬ್ಬ ದಸರಾ ಮಹೋತ್ಸವಕ್ಕೆ ಆಧುನಿಕ ತಂತ್ರಜ್ಞಾನದ ಮೆರುಗು ನೀಡುವ ನಿಟ್ಟಿನಲ್ಲಿ ಪಾಲಿಕೆ ವತಿಯಿಂದ ಈ ವಿಶೇಷ ಲೇಸರ್ ಶೋ ಆಯೋಜಿಸಲಾಗಿದೆ. ನಮ್ಮ ಶಿವಮೊಗ್ಗದ ಐತಿಹಾಸಿಕ ಹಿನ್ನೆಲೆ, ಕೆಳದಿ ಸಂಸ್ಥಾನದ ಗತವೈಭವ ಹಾಗೂ ಮಲೆನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಇಂದಿನ ಪೀಳಿಗೆಗೆ ಆಕರ್ಷಕವಾಗಿ ಪರಿಚಯಿಸಲು ಇಂತಹ ಬೆಳಕು ಮತ್ತು ಧ್ವನಿಯ ಪ್ರದರ್ಶನಗಳು ಅತ್ಯಂತ ಪರಿಣಾಮಕಾರಿಯಾಗಿವೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇದರ ಪ್ರಯೋಜನ ಪಡೆಯಬೇಕು,” ಎಂದು ತಿಳಿಸಿದರು.
