ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕದಡಿ 2026–27 ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಏಳು ಬ್ಲಾಕ್ ಬಿ.ಆರ್.ಸಿ ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರಂತೆ ಮಾನಸಿಕ ಆರೋಗ್ಯ ಸಲಹೆಗಾರ/ಸಮಾಲೋಚಕ ಹುದ್ದೆಗಳಿಗೆ ತಾತ್ಕಾಲಿಕವಾಗಿ ಫೆಬ್ರವರಿ-2027 ರವರೆಗೆ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಮೊದಲು ನಿಗದಿಪಡಿಸಲಾಗಿದ್ದ ಅಭ್ಯರ್ಥಿಗಳ ವಯೋಮಾನವನ್ನು ಇದೀಗ 26 ರಿಂದ 50 ವರ್ಷಕ್ಕೆ ಮರು ನಿಗದಿಗೊಳಿಸಲಾಗಿದೆ.
ಮನೋವಿಜ್ಞಾನ, ಕ್ಲಿನಿಕಲ್ ಅಥವಾ ಕೌನ್ಸಿಲಿಂಗ್ ಮನೋವಿಜ್ಞಾನ ಸಂಬಂಧಿತ ವಿಷಯಗಳಲ್ಲಿ ಎಂ.ಎ./ಎಂ.ಎಸ್ಸಿ. ತೇರ್ಗಡೆಯಾಗಿರುವ ಹಾಗೂ ಸೇವಾ ಅನುಭವವಿರುವ ಬದಲಾದ ವಯೋಮಾನದಲ್ಲಿರುವ ಆಸಕ್ತರು ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಂದ ಪಡೆದು ಪೂರಕ ದಾಖಲೆಗಳೊಂದಿಗೆ ದಿನಾಂಕ 27/10/2026 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9480695460, 9480695461 ಹಾಗೂ ಇ-ಮೇಲ್: egovshimoga@gmail.com ಅನ್ನು ಸಂಪರ್ಕಿಸಬಹುದು ಎಂದು ಉಪನಿರ್ದೇಶಕ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.
ಮಾನಸಿಕ ಆರೋಗ್ಯ ಸಲಹೆಗಾರರ ನೇಮಕಾತಿ. ವಯೋಮಿತಿ ಸಡಿಲಿಕೆ
Date:
