ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಇತರೆ ಅಗತ್ಯ ದಾಖಲೆಗಳನ್ನು ಪಡೆಯಲು ನಾಡಕಚೇರಿಗೆ ಭೇಟಿ ನೀಡುವ ಅವಶ್ಯಕತೆ ಇಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಎಲ್ಲಾ ಗ್ರಾ.ಪಂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನಾಡಕಚೇರಿ ಸೇವೆಗಳು ಲಭ್ಯವಿದ್ದು, ನಾಗರಿಕರು ಅಗತ್ಯ ಸೇವೆಗಳನ್ನು ಪಡೆಯಬಹುದು ಎಂದು ಪಂಚಾಯತ್ ರಾಜ್ ಇಲಾಖೆ ಪ್ರಕಟಣೆ ತಿಳಿಸಿದೆ.