ವಿಶ್ವವಿಖ್ಯಾತ ಶಿವಮೊಗ್ಗ ದಸರಾ ಜಂಬೂ ಸವಾರಿಯಲ್ಲಿ ಅಚಾತುರ್ಯ ಸಂಭವಿಸಿದೆ. ಅಂಬಾರಿ ಹೊತ್ತ ಸೋಮಣ್ಣ ಆನೆ ಏಕಾಏಕಿ ಬೆದರಿ, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ವಾಸವಿ ಶಾಲೆಯತ್ತ ದೌಡಾಯಿಸಿದೆ.
ಆನೆಯ ಆರ್ಭಟ ಕಂಡು ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಜನರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಈ ವೇಳೆ ಆನೆಯ ಓಡಾಟಕ್ಕೆ ಕಾರೊಂದು ಜಖಂಗೊಂಡಿದೆ.
ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಅರಣ್ಯ ಇಲಾಖೆ ಸಿಬ್ಬಂದಿ, ಮಾವುತರು ಹಾಗೂ ಕಾವಾಡಿಗರು ಹರಸಾಹಸ ಪಟ್ಟಿದ್ದಾರೆ. ಘಟನೆಯಿಂದಾಗಿ ಕೆಲಕಾಲ ಜಂಬೂ ಸವಾರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
