Valmiki Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವು ದಿನಾಂಕ: 26-10-2026 ರ ಸೋಮವಾರ ಬೆಳಿಗ್ಗೆ 11-00 ಗಂಟೆಗೆ ನಗರದ ಕುವೆಂಪು ರಂಗಮಂದಿರ, ಶಿವಮೊಗ್ಗ ಇಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ 9.30ಕ್ಕೆ ಶಿವಮೊಗ್ಗ ನಗರದ ವಾಲ್ಮೀಕಿ ವೃತ್ತದಲ್ಲಿ ಪೂಜೆ ಸಲ್ಲಿಸಿ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ವಿವಿಧ ಜನಪದ ತಂಡದೊಂದಿಗೆ ಕುವೆಂಪು ರಂಗಮಂದಿರಕ್ಕೆ ಆಗಮಿಸುತ್ತದೆ.
ಹೊಸನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುಖ್ಯೋಪಾಧ್ಯಾಯ ಡಾ. ಜಿ. ಸುಧಾಕರ ಇವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಡಳಿತ ಕೋರಿದೆ.
Valmiki Jayanti ಅ.26.ಮಹರ್ಷಿ ವಾಲ್ಮೀಕಿ ಜಯಂತಿ. ಜಿಲ್ಲಾಡಳಿತ ಆಚರಣೆ ಮಾಹಿತಿ
Date:
