ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿ ತಾಂತ್ರಿಕ ಕಾರಣಗಳಿಂದ ಹಾನಿಗೊಳಗಾಗಿದ್ದ ಅಂಬಾರಿಯನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಖುದ್ದಾಗಿ ವೀಕ್ಷಿಸಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ತಜ್ಞರಿಂದ ಅಂಬಾರಿಗೆ ಉಂಟಾಗಿರುವ ಹಾನಿಯ ಕುರಿತು ತಾಂತ್ರಿಕ ಮಾಹಿತಿಯನ್ನು ಪಡೆದುಕೊಂಡರು. ಅಂಬಾರಿಯ ದುರಸ್ತಿ ಕಾರ್ಯ, ಸಂರಕ್ಷಣೆ ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ಅಂಬಾರಿಯ ಸುರಕ್ಷತೆ ಮತ್ತು ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಪರಿಶೀಲನೆ ವೇಳೆ ಜಿಲ್ಲಾ ರಕ್ಷಣಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಪಾಲಿಕೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
