Sunday, October 25, 2026
Sunday, October 25, 2026

Rain In Shivamogga ಮಲೆನಾಡಿನ ಕಡೆ ಮಳೆ : ಹವಾಮಾನ ಸಾರಾಂಶ

Date:

Rain In Shivamogga ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮುಂದಿನ ಎರಡು ಮೂರು ದಿನ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಅಕ್ಟೋಬರ್ 26ರಿಂದ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಬಂಟ್ವಾಳ, ಕಾರ್ಕಳ ಮತ್ತು ಪುತ್ತೂರು ತಾಲ್ಲೂಕುಗಳಲ್ಲಿ ಉತ್ತಮ ಮಳೆ ದಾಖಲಾಗಿದೆ. ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ದಕ್ಷಿಣ ಕನ್ನಡದಲ್ಲಿ ಸಂಜೆ ಹಾಗೂ ಉಡುಪಿ, ಉತ್ತರ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿಗೆ ಹೊಂದಿಕೊಂಡಿರುವ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಬಹುದು.

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಸಾಮಾನ್ಯ ಮಳೆಯಾಗಬಹುದು.

Rain In Shivamogga ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಕೆಲವೆಡೆ ಸಂಜೆ ಬಳಿಕ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಅರಬ್ಬೀ ಸಮುದ್ರದ ದಕ್ಷಿಣ ಭಾಗದಲ್ಲಿ ಕೇರಳದ ಸಮೀಪ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಕೇರಳ ಮತ್ತು ತಮಿಳುನಾಡಿನ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯ ಅಂಡಮಾನ್ ಉತ್ತರ ಭಾಗದಲ್ಲಿರುವ ಮೇಲ್ಮೈ ಸುಳಿಗಾಳಿಯು ಪ್ರಬಲ ವಾಯುಭಾರ ಕುಸಿತವಾಗಿ ಅಕ್ಟೋಬರ್ 28ರ ವೇಳೆಗೆ ಆಂಧ್ರಪ್ರದೇಶದತ್ತ ಚಲಿಸುವ ಸಾಧ್ಯತೆಯಿದೆ. ಬಳಿಕ ಒಡಿಶಾ ಕಡೆಗೆ ಸಾಗುವ ಸಂದರ್ಭದಲ್ಲಿ ಹಿಂಗಾರು ಮಾರುತಗಳನ್ನು ಸೆಳೆಯುವ ಪರಿಣಾಮ ದಕ್ಷಿಣ ಭಾರತದಲ್ಲಿ ಮಳೆ ಪ್ರಮಾಣ ಕಡಿಮೆಯಾಗಬಹುದು ಎಂದು ಮುನ್ಸೂಚನೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಪತಿ ಮತ್ತು ಪತಿಮನೆಯವರಿಂದ ಕಿರುಕುಳ: ಗೃಹಿಣಿ ಆತ್ಮಹತ್ಯೆ.

Breaking News ಗಂಡ ಹಾಗೂ ಗಂಡನ ಮನೆಯವರ ಕಿರುಕುಳದಿಂದ ವಿಷ ಸೇವಿಸಿ...

Hartalu Halappa ರಾಜ್ಯದಲ್ಲಿ ವಿದ್ಯುತ್ ಕೊರತೆ: ಸರ್ಕಾರದ ಅಸಮರ್ಥತೆ- ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಪ್ರಶ್ನೆ.

Hartalu Halappa ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ...

Shimoga Pes College ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧ ಮಂಡನೆ: ಎಂಬಿಎ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ.

Shimoga Pes College ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ ಪಿಇಎಸ್‌ಐಟಿ‌ಎಂ...