Shimoga Pes College ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ ಪಿಇಎಸ್ಐಟಿಎಂ ವಿದ್ಯಾರ್ಥಿಗಳು
ನಗರದ ಪಿಇಎಸ್ಐಟಿಎಂ ಕಾಲೇಜಿನ ದ್ವಿತೀಯ ವರ್ಷದ ಎಂಬಿಎ ವಿಭಾಗದ ಒಟ್ಟು ಎರಡು ಜನ ವಿದ್ಯಾರ್ಥಿಗಳು ಶಿಕಾರಿಪುರದ ಕುಮದ್ವತಿ ಕಾಲೇಜ್ ಆಫ್ ಎಜುಕೇಷನ್ನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ.
ಇವರಿಗೆ ಪಿಇಎಸ್ಐಟಿಎಂ ಎಂಬಿಎ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಐಶ್ವರ್ಯ ಎಚ್.ಎಸ್. ಅವರು ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ಹಣಕಾಸು ಮತ್ತು ವಚನಾಧಾರಿತ ವಿಷಯಗಳಿಗೆ ಸಂಬಂಧಿಸಿದ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದರು.
Shimoga Pes College ವಿದ್ಯಾರ್ಥಿಗಳ ಈ ಸಾಧನೆಗೆ ಪಿಇಎಸ್ಐಟಿಎಂ ಕುಲಸಚಿವರಾದ ಡಾ. ನಾಗರಾಜ್ ಆರ್., ಪಿಇಎಸ್ಐಟಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಸ್ವಾಮಿ ಡಿ. ಆರ್. ಹಾಗೂ ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ. ವಿಕ್ರಮ ಡಿ.ಕೆ. ಅವರು ಹರ್ಷ ವ್ಯಕ್ತಪಡಿಸಿ, ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಈ ಸಾಧನೆ ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ ಬೆಳೆಸುವುದರ ಜೊತೆಗೆ, ಅವರ ಶೈಕ್ಷಣಿಕ ಪ್ರಗತಿಗೆ ಮತ್ತಷ್ಟು ಉತ್ತೇಜನ ನೀಡಿದೆ.
