ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ನ್ಯಾಷನಲ್ ಕಾಲೇಜ್ ಆಫ್ ಫಾರ್ಮಸಿ ವತಿಯಿಂದ ಇಂದು ಎಸ್‌ಆರ್‌ಎನ್‌ಎಂ ಸಭಾಂಗಣದಲ್ಲಿ ಆಯೋಜಿಸಿದ್ದ 2026–27ನೇ ಸಾಲಿನ ನೂತನ ವಿದ್ಯಾರ್ಥಿಗಳ ಓರಿಯೆಂಟೇಷನ್ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಾ ಧನಂಜಯ ಸರ್ಜಿ ಪಾಲ್ಗೊಂಡು, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಆರೋಗ್ಯ ಸೇವೆಯಲ್ಲಿ ಔಷಧ ವಿಜ್ಞಾನದ ಮಹತ್ವ, ಔಷಧಗಳ ಗುಣಮಟ್ಟ ಮತ್ತು ಸುರಕ್ಷತೆ, ಸಂಶೋಧನಾ ಕ್ಷೇತ್ರದಲ್ಲಿನ ಹೊಸ ಅವಕಾಶಗಳು ಹಾಗೂ ಭಾರತದ ಔಷಧ ಉದ್ಯಮದ ಬೆಳವಣಿಗೆಯ ಕುರಿತು ವಿದ್ಯಾರ್ಥಿಗಳೊಂದಿಗೆ ವಿಚಾರಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ನಿರ್ದೇಶಕರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಮತಿ ಎಂ. ಆರ್. ಸೀತಾಲಕ್ಷ್ಮಿ, ಪಾಸಿಟಿವ್ ಮೈಂಡ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಅರವಿಂದ್ ಎಸ್. ಟಿ., ನ್ಯಾಷನಲ್ ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಡಾ. ಎಸ್. ಎನ್. ಶ್ರೀಹರ್ಷ ಅವರು ಉಪಸ್ಥಿತರಿದ್ದರು.
