ಭದ್ರಾವತಿ ತಾಲೂಕಿನ ಆನವೇರಿಯಲ್ಲಿ ನೂತನ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ಮಂಗಳವಾರ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಸ್ಥಳೀಯವಾಗಿಯೇ ಒದಗಿಸುವ ಉದ್ದೇಶದಿಂದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಟ್ಟಡ ನಿರ್ಮಾಣದಿಂದ ಆನವೇರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಆಯುರ್ವೇದ ಚಿಕಿತ್ಸಾ ಸೌಲಭ್ಯಗಳು ಸುಲಭವಾಗಿ ಲಭ್ಯವಾಗಲಿದ್ದು, ಆರೋಗ್ಯ ಸೇವೆಗಳ ವಿಸ್ತರಣೆಗೆ ಸಹಕಾರಿಯಾಗಲಿದೆ.
ಆಯುರ್ವೇದವು ಭಾರತೀಯ ಪರಂಪರೆಯ ಪ್ರಮುಖ ವೈದ್ಯಕೀಯ ಪದ್ಧತಿಯಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಇದರ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಸರ್ಕಾರಿ ಚಿಕಿತ್ಸಾಲಯಗಳ ಅಭಿವೃದ್ಧಿ ಮಹತ್ವದ್ದಾಗಿದೆ. ಸಾರ್ವಜನಿಕರಿಗೆ ಅಗತ್ಯ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ, ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯಕೀಯ ಮೂಲಸೌಕರ್ಯವನ್ನು ಬಲಪಡಿಸಲು ಆದ್ಯತೆ ನೀಡಲಾಗುತ್ತಿದೆ.
ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕರ ಸೇವೆಗೆ ಸಮರ್ಪಿಸುವಂತೆ ಸಂಬAಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗಮನಹರಿಸಬೇಕು ಎಂಬ ಆಶಯ ವ್ಯಕ್ತವಾಯಿತು.
