ಶಿವಮೊಗ್ಗ ನಗರದ ಬಿಹೆಚ್ ರಸ್ತೆಯ ಶಿವಪ್ಪನಾಯಕ ವೃತ್ತದಲ್ಲಿ ಫುಟ್ಪಾತ್ ಅತಿಕ್ರಮಣ ತೆರವುಗೊಳಿಸುವ ಕಾರ್ಯಾಚರಣೆಯನ್ನು ಟ್ರಾಫಿಕ್ ಪೊಲೀಸರು ನಡೆಸಿದರು.
ಟ್ರಾಫಿಕ್ ಇನ್ಸ್ಪೆಕ್ಟರ್ ದೇವರಾಜ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಫುಟ್ಪಾತ್ ಆಕ್ರಮಿಸಿಕೊಂಡಿದ್ದ ಹೂವಿನ ಮಳಿಗೆಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಯಿತು. ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ಫುಟ್ಪಾತ್ ಖಾಲಿ ಮಾಡುವಂತೆ ಪೊಲೀಸರು ಹಲವು ಬಾರಿ ಸೂಚನೆ ನೀಡಿದ್ದರೂ, ವ್ಯಾಪಾರಿಗಳು ಅದನ್ನು ಪಾಲಿಸಿರಲಿಲ್ಲ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಮೈಕ್ ಮೂಲಕ ಅನೌನ್ಸ್ ಮಾಡಿ, ಹೂವಿನ ವ್ಯಾಪಾರಿಗಳಿಗೆ ಕೊನೆಯ ಎಚ್ಚರಿಕೆ ನೀಡಿದ ಬಳಿಕ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು.
ಫುಟ್ಪಾತ್ ಅತಿಕ್ರಮಣ ತೆರವುಗೊಂಡಿರುವುದರಿಂದ ಶಿವಪ್ಪನಾಯಕ ವೃತ್ತದಲ್ಲಿ ಪಾದಚಾರಿಗಳು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಫುಟ್ಪಾತ್ಗಳನ್ನು ಅತಿಕ್ರಮಿಸದಂತೆ ಪೊಲೀಸರು ವ್ಯಾಪಾರಿಗಳಿಗೆ ಸೂಚನೆ ನೀಡಿದ್ದಾರೆ.
