Thursday, October 29, 2026
Thursday, October 29, 2026

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Date:

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ 2027-28ನೇ ಶೈಕ್ಷಣಿಕ ಸಾಲಿಗೆ ಪದವಿ ಕಾಲೇಜುಗಳನ್ನು ಪ್ರಾರಂಭಿಸಲು ಹಾಗೂ ಮುಂದುವರಿಸಲು ಸಂಯೋಜನೆ ಪಡೆಯುವ ಸಂಬಂಧ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 2000ರ ಕಲಂ 59(10)ರ ಪ್ರಕಾರ ಹೊಸ ಕಾಲೇಜುಗಳ ಪ್ರಾರಂಭ ಹಾಗೂ ಈಗಾಗಲೇ ಇರುವ ಕಾಲೇಜುಗಳ ಸಂಯೋಜನೆ ಮುಂದುವರಿಕೆಗೆ ಅರ್ಜಿಗಳನ್ನು ಯುಯುಸಿಎಂಎಸ್ ಆನ್‌ಲೈನ್ ಪೋರ್ಟಲ್ ಮೂಲಕ ಸಲ್ಲಿಸಬೇಕು. ವಿಶ್ವವಿದ್ಯಾಲಯದ ವ್ಯಾಪ್ತಿಯ ಕಲಾ, ವಿಜ್ಞಾನ, ವಾಣಿಜ್ಯ, ಶಿಕ್ಷಣ, ಕಾನೂನು, ದೈಹಿಕ ಶಿಕ್ಷಣ ಹಾಗೂ ಇತರ ಪದವಿ ಕಾಲೇಜುಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಯುಯುಸಿಎಂಎಸ್ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅ.26 ರಿಂದ ಅವಕಾಶ ಕಲ್ಪಿಸಲಾಗಿದ್ದು, ದಂಡ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸಲು ನ.10 ಕೊನೆಯ ದಿನವಾಗಿದೆ. ರೂ.10,000 ದಂಡ ಶುಲ್ಕದೊಂದಿಗೆ ನ.11ರಿಂದ ನ.21ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
Kuvempu University ಅರ್ಜಿ ಸಲ್ಲಿಸುವ ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ www.kuvempu.ac.in⁠ ಸಂಪರ್ಕಿಸಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Radio Shivamogga ಕನ್ನಡ ರಾಜ್ಯೋತ್ಸವಕ್ಕೆ ರೇಡಿಯೋ ಶಿವಮೊಗ್ಗ 90.8 ಎಫ್.ಎಂ.ನಿಂದ 24 ಗಂಟೆಗಳ ನಿರಂತರ ನೇರಪ್ರಸಾರ

‘ರೇಡಿಯೋ ಶಿವಮೊಗ್ಗ ೯೦.೮ಎಫ್.ಎಂ. ಹಾಗೂ ಪರಿಸರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಕನ್ನಡ...

Breaking News ಪತಿ ಮತ್ತು ಪತಿಮನೆಯವರಿಂದ ಕಿರುಕುಳ: ಗೃಹಿಣಿ ಆತ್ಮಹತ್ಯೆ.

Breaking News ಗಂಡ ಹಾಗೂ ಗಂಡನ ಮನೆಯವರ ಕಿರುಕುಳದಿಂದ ವಿಷ ಸೇವಿಸಿ...

Hartalu Halappa ರಾಜ್ಯದಲ್ಲಿ ವಿದ್ಯುತ್ ಕೊರತೆ: ಸರ್ಕಾರದ ಅಸಮರ್ಥತೆ- ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಪ್ರಶ್ನೆ.

Hartalu Halappa ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ...

Shimoga Pes College ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧ ಮಂಡನೆ: ಎಂಬಿಎ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ.

Shimoga Pes College ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ ಪಿಇಎಸ್‌ಐಟಿ‌ಎಂ...