ಎಚ್ಐವಿ/ಏಡ್ಸ್ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಂತರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಅ.30ರಂದು ಬೆಳಿಗ್ಗೆ 10 ಗಂಟೆಗೆ ಮೆಗ್ಗಾನ್ ಆಸ್ಪತ್ರೆ ಆವರಣದಿಂದ ಜಿಲ್ಲಾ ಮಟ್ಟದ ಬೈಕ್ ರ್ಯಾಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಎಚ್ಐವಿ/ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಯುವಜನರಿಗೆ ಜಾಗೃತಿ ಮೂಡಿಸುವುದು ಮತ್ತು ಸಂಬಂಧಿತ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಲಿದ್ದಾರೆ.
ಬೈಕ್ ರ್ಯಾಲಿ ಮಾರ್ಗ: ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಆವರಣದಿಂದ ಪ್ರಾರಂಭಗೊಂಡು ಮುಖ್ಯ ಬಸ್ ನಿಲ್ದಾಣ ಅಮೀರ್ ಅಹಮದ್ ಸರ್ಕಲ್, ಗೋಪಿ ಸರ್ಕಲ್, ಕೋರ್ಟ್ ಸರ್ಕಲ್, ಶಿವಮೂರ್ತಿ ಸರ್ಕಲ್, ಜೈಲ್ ಸರ್ಕಲ್, ಸರ್ಕಿಟ್ ಹೌಸ್ ಮುಖಾಂತರ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಆವರಣದ ಜಿಲ್ಲಾ ಕ್ಷಯರೋಗ ನಿವಾರಣ ಕೇಂದ್ರ ಕಛೇರಿಯಲ್ಲಿ ಕೊನೆಗೊಳ್ಳಲಿದೆ.
ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಕಾರ್ಯಕ್ರಮಾಧಿಕಾರಿ ಕೋರಿದ್ದಾರೆ.
ಎಚ್ಐವಿ/ಏಡ್ಸ್ ಜಾಗೃತಿಗಾಗಿ ಅ.30 ರಂದು ಜಿಲ್ಲಾ ಮಟ್ಟದ ಬೈಕ್ ರ್ಯಾಲಿ
Date:
