Thursday, October 29, 2026
Thursday, October 29, 2026

ಕುವೆಂಪು ವಿವಿ: ಸಹಕಾರ ತತ್ವ ಕುರಿತ ಚರ್ಚಾ ಸ್ಫರ್ಧೆ

Date:

ದೇಶದ ಆರ್ಥಿಕ ಬೆಳವಣಿಗೆಗೆ ವೇಗ ಒದಗಿಸಿಕೊಡುವಲ್ಲಿ ಮತ್ತು ಜನಜೀವನ ಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ಮಹತ್ವವಾದುದು ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಆರ್. ತಿಮ್ಮರಾಯಪ್ಪ ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಗಮದ ಸಹಯೋಗದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗ ಬುಧವಾರ ಜ್ಞಾನಸಹ್ಯಾದ್ರಿಯ ಪ್ರೊ. ವೆಂಕಟರಾಮಯ್ಯ ಸಭಾಂಗಣದಲ್ಲಿ ಆಯೋಜಿಸಿದ್ದ “ಸಹಕಾರ ತತ್ವ” ಕುರಿತ ಚರ್ಚಾಸ್ಫರ್ಧೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಮುಲ್ ಎಂದೇ ಪ್ರಸಿದ್ಧವಾದ ಗುಜರಾತ್ ಮೂಲದ ಆನಂದ್ ಹಾಲು ಉತ್ಪಾದಕರ ಸಂಘ, ನಂದಿನಿ, ಮಲೆನಾಡು ಭಾಗದ ಮ್ಯಾಮ್ಕೋಸ್ ನಂತಹ ಸಹಕಾರಿ ಸಂಸ್ಥೆಗಳು ರೈತರು, ಜನಸಾಮಾನ್ಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಮಹತ್ತರ ಕಾರ್ಯ ಮಾಡುತ್ತಿವೆ. ದೇಶಾದ್ಯಂತ ಇಂತಹಾ ಸುಮಾರು ಎಂಟೂವರೆ ಲಕ್ಷ ಸಹಕಾರಿ ಸಂಘಗಳು ಗುಡಿಕೈಗಾರಿಕೆ, ಸಣ್ಣ ಮತ್ತು ಮಧ್ಯಮ ಉದ್ಯಮ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ದೇಶದ ಆರ್ಥಿಕತೆಯನ್ನು ಸದೃಢಗೊಳಿಸುತ್ತಿವೆ ಎಂದರು.

ಅರ್ಥಶಾಸ್ತ್ರ ವಿಭಾಗದ ಅಧ್ಯಕ್ಷ ಪ್ರೊ. ಸತ್ಯಪ್ರಕಾಶ್ ಎಂ. ಆರ್, ಜಿಲ್ಲಾ ಸಹಕಾರ ಯೂನಿಯನ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಶವಂತಕುಮಾರ್. ಹೆಚ್, ಸಹಕಾರ ನಿರ್ವಹಣಾ ಸಂಸ್ಥೆಯ ಉಪನ್ಯಾಸಕಿ ಡಾ. ಸೌಮ್ಯ. ಕೆ, ಡಾ. ವಡಿವೇಲು, ಡಾ. ಹಾಲಸ್ವಾಮಿ, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...

Radio Shivamogga ಕನ್ನಡ ರಾಜ್ಯೋತ್ಸವಕ್ಕೆ ರೇಡಿಯೋ ಶಿವಮೊಗ್ಗ 90.8 ಎಫ್.ಎಂ.ನಿಂದ 24 ಗಂಟೆಗಳ ನಿರಂತರ ನೇರಪ್ರಸಾರ

‘ರೇಡಿಯೋ ಶಿವಮೊಗ್ಗ ೯೦.೮ಎಫ್.ಎಂ. ಹಾಗೂ ಪರಿಸರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಕನ್ನಡ...

Breaking News ಪತಿ ಮತ್ತು ಪತಿಮನೆಯವರಿಂದ ಕಿರುಕುಳ: ಗೃಹಿಣಿ ಆತ್ಮಹತ್ಯೆ.

Breaking News ಗಂಡ ಹಾಗೂ ಗಂಡನ ಮನೆಯವರ ಕಿರುಕುಳದಿಂದ ವಿಷ ಸೇವಿಸಿ...

Hartalu Halappa ರಾಜ್ಯದಲ್ಲಿ ವಿದ್ಯುತ್ ಕೊರತೆ: ಸರ್ಕಾರದ ಅಸಮರ್ಥತೆ- ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಪ್ರಶ್ನೆ.

Hartalu Halappa ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ...