ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವು 2026-27 ನೇ ಸಾಲಿಗೆ ವಿವಿಧ ಯೋಜನೆಗಳಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ನ.30 ರಂದು ಕೊನೆಯ ದಿನವಾಗಿದ್ದು, 2023-24, 2024-25 ಮತ್ತು 2025-26 ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿದವರು ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ವಿವಿಧ ಆರ್ಥಿಕ ಯೋಜನೆಗಳಾದ ನೇರಸಾಲ ಯೋಜನೆ, ಹೈನುಗಾರಿಕೆ, ಕುರಿ ಸಾಕಾಣಿಕೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್, ಮೈಕ್ರೋಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಿಗೆ ಶಿವಮೊಗ್ಗ 1, ಗ್ರಾಮ ಒನ್, ಕರ್ನಾಟಕ1, ಸೇವಾ ಸಿಂಧು, ಪೋರ್ಟಲ್ ಮೂಲಕ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://sevaone.karnataka.gov.in/services/ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಜಿಲ್ಲ ಪಂಚಾಯತ್ ಕಾರ್ಯಾಲಯ, ಕುವೆಂಪು ರಸ್ತೆ, ಶಿವಮೊಗ್ಗ ಇಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯಸ್ಥಾಪಕರು ತಿಳಿಸಿದ್ದಾರೆ.
ಭೋವಿ ಅಭಿವೃದ್ಧಿ ನಿಗಮದಿಂದ ವಿವಿಧ ಆರ್ಥಿಕ ಯೋಜನೆಗಳಿಗೆ ಅರ್ಜಿ ಆಹ್ವಾನ
Date:
