ಶಿವಮೊಗ್ಗ ಜಿಲ್ಲಾ ಬಾಲ ಭವನ ಸಮಿತಿಯು 2026-27ನೇ ಸಾಲಿನ ಮಕ್ಕಳ ದಿನಾಚರಣೆ ಅಂಗವಾಗಿ ನ.03 ರಂದು ಬೆಳಗ್ಗೆ 10 ಕ್ಕೆ ಸರ್ಕಾರಿ ವೀಕ್ಷಣಾಲಯ, ಆಲ್ಕೋಳ, ಶಿವಮೊಗ್ಗ ಇಲ್ಲಿ 9 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಸೃಜನಾತ್ಮಕ ಕಲೆ, ಬರವಣಿಗೆ, ಪ್ರದರ್ಶನ ಕಲೆ ಮತ್ತು ವಿಜ್ಞಾನದಲ್ಲಿ ನೂತನ ಆವಿಷ್ಕಾರ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಈ ಸ್ಪರ್ಧೆಗಳಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-295514 ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿರುತ್ತಾರೆ.
ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆಗಳ ಆಯೋಜನೆ
Date:
