Friday, October 30, 2026
Friday, October 30, 2026

ಜೋನಲ್ ಕಲಾ ವೈಭವದಲ್ಲಿ ಕೋಣಂದೂರು ರೋಟರಿ ಕ್ಲಬ್‌ಗೆ ಹಲವು ಪ್ರಶಸ್ತಿಗಳ ಗರಿ

Date:

ಸೊರಬದಲ್ಲಿ ನಡೆದ ಜೋನಲ್ ಲೆವೆಲ್ ಸಾಂಸ್ಕೃತಿಕ ಸ್ಪರ್ಧೆ ಜೋನಲ್ ಕಲಾ ವೈಭವದಲ್ಲಿ ಕೋಣಂದೂರು ರೋಟರಿ ಕ್ಲಬ್‌ನ ಸದಸ್ಯರು, ಕುಟುಂಬದವರು ಹಾಗೂ ಮಕ್ಕಳು ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ.

ಸ್ಪರ್ಧೆಯಲ್ಲಿ ಕೋಣಂದೂರು ರೋಟರಿ ಕ್ಲಬ್‌ನ ಡಾ. ಮುಂಜುನಾಥ್ ಅವರು ಸೋಲೋ ಸಾಂಗ್‌ನಲ್ಲಿ ಪ್ರಥಮ ಸ್ಥಾನ ಪಡೆದರೆ, ನೃತ್ಯ ಸ್ಪರ್ಧೆಯಲ್ಲಿ ಕೊಣಂದೂರು ರೋಟರಿ ಕ್ಲಬ್ ತಂಡ ದ್ವಿತೀಯ ಸ್ಥಾನ ಹಾಗೂ ನಾಟಕ ಸ್ಪರ್ಧೆಯಲ್ಲಿ ಕ್ಲಬ್ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಇದಲ್ಲದೆ, ಕರಾವಳಿ ಭಾಗದ ಪ್ರಸಿದ್ಧ ಯಕ್ಷಗಾನ ಕಲೆಯ ವೇಷಭೂಷಣದೊಂದಿಗೆ ನೃತ್ಯ ಪ್ರದರ್ಶಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

ಈ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕೋಣಂದೂರು ರೋಟರಿ ಕ್ಲಬ್‌ನ 50ಕ್ಕೂ ಹೆಚ್ಚು ಸದಸ್ಯರು ಹಾಗೂ ಕುಟುಂಬದವರು ಉತ್ಸಾಹದಿಂದ ಭಾಗವಹಿಸಿ ಕ್ಲಬ್‌ನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿಗಳನ್ನು ಪಡೆದು ಕ್ಲಬ್‌ಗೆ ಹೆಮ್ಮೆ ತಂದ ಎಲ್ಲ ಕಲಾವಿದರು ಹಾಗೂ ಸದಸ್ಯರನ್ನು ಕ್ಲಬ್ ಅಭಿನಂದಿಸುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...

Radio Shivamogga ಕನ್ನಡ ರಾಜ್ಯೋತ್ಸವಕ್ಕೆ ರೇಡಿಯೋ ಶಿವಮೊಗ್ಗ 90.8 ಎಫ್.ಎಂ.ನಿಂದ 24 ಗಂಟೆಗಳ ನಿರಂತರ ನೇರಪ್ರಸಾರ

‘ರೇಡಿಯೋ ಶಿವಮೊಗ್ಗ ೯೦.೮ಎಫ್.ಎಂ. ಹಾಗೂ ಪರಿಸರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಕನ್ನಡ...

Breaking News ಪತಿ ಮತ್ತು ಪತಿಮನೆಯವರಿಂದ ಕಿರುಕುಳ: ಗೃಹಿಣಿ ಆತ್ಮಹತ್ಯೆ.

Breaking News ಗಂಡ ಹಾಗೂ ಗಂಡನ ಮನೆಯವರ ಕಿರುಕುಳದಿಂದ ವಿಷ ಸೇವಿಸಿ...