Friday, October 30, 2026
Friday, October 30, 2026

ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಗಿರೀಶ್ ಕುಮಾರ್ ಅವರಿಗೆ ಎಸ್‌ಪಿ ನಿಖಿಲ್ ಅಂತಿಮ ಗೌರವ ನಮನ

Date:

ಶಿಕಾರಿಪುರದ ಪೊಲೀಸ್ ಸಿಬ್ಬಂದಿ ಗಿರೀಶ್ ಕುಮಾರ್ ಅವರು ರಸ್ತೆ ಅಪಘಾತದಲ್ಲಿ ಅಕಾಲಿಕವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ, ಶಿಕಾರಿಪುರ ತಾಲ್ಲೂಕಿನ ಸಾಲೂರು ಗ್ರಾಮದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಖಿಲ್ ಅವರು ಗಿರೀಶ್ ಕುಮಾರ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿ ಅಂತಿಮ ಗೌರವ ಅರ್ಪಿಸಿದರು. ಪೊಲೀಸ್ ಇಲಾಖೆಯ ವತಿಯಿಂದ ಮೃತ ಸಿಬ್ಬಂದಿಗೆ ಗೌರವ ವಂದನೆ ಸಲ್ಲಿಸಲಾಯಿತು.

ಪೊಲೀಸ್ ಇಲಾಖೆಯಲ್ಲಿ ಗಿರೀಶ್ ಕುಮಾರ್ ಅವರು ಸಲ್ಲಿಸಿದ ಸೇವೆ ಹಾಗೂ ಕರ್ತವ್ಯನಿಷ್ಠೆಯನ್ನು ಎಸ್‌ಪಿ ನಿಖಿಲ್ ಅವರು ಸ್ಮರಿಸಿದರು. ಅಲ್ಲದೆ, ದುಃಖತಪ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಜಿಲ್ಲಾ ಪೊಲೀಸ್ ಇಲಾಖೆಯ ಪರವಾಗಿ ತೀವ್ರ ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...

Radio Shivamogga ಕನ್ನಡ ರಾಜ್ಯೋತ್ಸವಕ್ಕೆ ರೇಡಿಯೋ ಶಿವಮೊಗ್ಗ 90.8 ಎಫ್.ಎಂ.ನಿಂದ 24 ಗಂಟೆಗಳ ನಿರಂತರ ನೇರಪ್ರಸಾರ

‘ರೇಡಿಯೋ ಶಿವಮೊಗ್ಗ ೯೦.೮ಎಫ್.ಎಂ. ಹಾಗೂ ಪರಿಸರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಕನ್ನಡ...

Breaking News ಪತಿ ಮತ್ತು ಪತಿಮನೆಯವರಿಂದ ಕಿರುಕುಳ: ಗೃಹಿಣಿ ಆತ್ಮಹತ್ಯೆ.

Breaking News ಗಂಡ ಹಾಗೂ ಗಂಡನ ಮನೆಯವರ ಕಿರುಕುಳದಿಂದ ವಿಷ ಸೇವಿಸಿ...