Friday, October 30, 2026
Friday, October 30, 2026

ಶಿಕಾರಿಪುರದ ಗಬ್ಬೂರು ಬಳಿ ಭೀಕರ ರಸ್ತೆ ಅಪಘಾತ – ಖಾಸಗಿ ಬಸ್ ಡಿಕ್ಕಿಗೆ ಬೈಕ್ ಸವಾರ ಸಾವು

Date:

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಗಬ್ಬೂರು ಗ್ರಾಮದ ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಕುಸ್ಕೂರು ಗ್ರಾಮದ ಚಂದ್ರನಾಯ್ಕ್ (41) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶಿರಾಳಕೊಪ್ಪದಿಂದ ಶಿಕಾರಿಪುರ ಪಟ್ಟಣದ ಕಡೆಗೆ ಬರುತ್ತಿದ್ದ ಖಾಸಗಿ ಬಸ್, ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಚಂದ್ರನಾಯ್ಕ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...

Radio Shivamogga ಕನ್ನಡ ರಾಜ್ಯೋತ್ಸವಕ್ಕೆ ರೇಡಿಯೋ ಶಿವಮೊಗ್ಗ 90.8 ಎಫ್.ಎಂ.ನಿಂದ 24 ಗಂಟೆಗಳ ನಿರಂತರ ನೇರಪ್ರಸಾರ

‘ರೇಡಿಯೋ ಶಿವಮೊಗ್ಗ ೯೦.೮ಎಫ್.ಎಂ. ಹಾಗೂ ಪರಿಸರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಕನ್ನಡ...

Breaking News ಪತಿ ಮತ್ತು ಪತಿಮನೆಯವರಿಂದ ಕಿರುಕುಳ: ಗೃಹಿಣಿ ಆತ್ಮಹತ್ಯೆ.

Breaking News ಗಂಡ ಹಾಗೂ ಗಂಡನ ಮನೆಯವರ ಕಿರುಕುಳದಿಂದ ವಿಷ ಸೇವಿಸಿ...