ಶಿರಾಳಕೊಪ್ಪ–ಆನವಟ್ಟಿ ರಸ್ತೆಯ ಜಾವಗಟ್ಟಿ ಹಾಗೂ ಬೆಳ್ಳಿಗಾವಿ ಗ್ರಾಮದ ನಡುವೆ ಮಾರುತಿ 800 ಕಾರು ಹಾಗೂ ಮತ್ತೊಂದು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 22 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮೃತ ಯುವಕನನ್ನು ಲಿಂಗರಾಜ್ ಎಂದು ಗುರುತಿಸಲಾಗಿದೆ. ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದ ತೀವ್ರತೆಗೆ ಮಾರುತಿ 800 ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಡಿಕ್ಕಿಯ ರಭಸಕ್ಕೆ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
