ಸಾಗರದ ಪ್ರಗತಿ ಸಂಯುಕ್ತ ಶಾಲೆಯಲ್ಲಿ “ಸುರಕ್ಷಿತ್ ಬಚ್ಪನ್ ಅಭಿಯಾನ”ದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ(ರಿ) , ಪ್ರಗತಿ ಕಾಂಪೋಸಿಟ್ ಶಾಲೆ, ಸಾಗರ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಗೌರವಾನ್ವಿತ ಶ್ರೀಮತಿ ದೀಪಾ ಕೆ.ಆರ್.,ಹೆಚ್ಚುವರಿ ಹಿರಿಯ ವ್ಯವಹಾರ ನ್ಯಾಯಾಧೀಶರು , ಜೆ.ಎಂ.ಎಫ್.ಸಿ , ಸಾಗರ ಇವರು ಮಕ್ಕಳ ಸುರಕ್ಷತೆ, ಮಕ್ಕಳ ಹಕ್ಕುಗಳು, ಕಾನೂನು ಅರಿವು ಹಾಗೂ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ವಿಷಯಗಳ ಕುರಿತು ಮಾಹಿತಿ ನೀಡಿದರು.
ಶ್ರೀ ಎಂ ಬಿ ಗಿರೀಶ್ ಗೌಡರು , ಅಧ್ಯಕ್ಷರು, ವಕೀಲರ ಸಂಘ ಸಾಗರ ಇವರು ಉಪಸ್ಥಿತರಿದ್ದು ಉಪಯುಕ್ತ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಸಹ ಕಾರ್ಯದರ್ಶಿಗಳಾದ ಶ್ರೀ ಎಂ ಆರ್ ಸತ್ಯನಾರಾಯಣ ರವರು ವಹಿಸಿದ್ದರು. ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರಾದ ವಿ ಟಿ ಸ್ವಾಮಿ , ಪೊಲೀಸ್ ಇಲಾಖೆಯ ಸಿಬ್ಬಂದಿ, ECO ಪಾಲಾಕ್ಷಪ್ಪ, ಶಾಲೆಯ ಮುಖ್ಯೋಪಾಧ್ಯಾಯಿನಿಯವರು , ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
“ ಸುರಕ್ಷಿತ್ ಬಚ್ಪನ್ ಅಭಿಯಾನ”ದಡಿ ಕಾನೂನು ಅರಿವು ಕಾರ್ಯಕ್ರಮ
Date:
