Sunday, November 1, 2026
Sunday, November 1, 2026

ಭ್ರಷ್ಟಾಚಾರ ಎಂಬುದು ಸುಶಿಕ್ಷಿತ ಸಮಾಜಕ್ಕೆ ಅಂಟಿದ ಕಳಂಕ : ಮಂಜುನಾಥ ಜಿ.ಎ.

Date:

ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಜನಪರ ಆಡಳಿತದ ಮೂಲಕ ಭಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ಜಿ.ಎ. ಅವರು ಹೇಳಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ಲೋಕಾಯುಕ್ತ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯಿತಿಯ ಅಬ್ದುಲ್‌ನಜೀರ್‌ಸಾಬ್‌ಸಭಾಂಗಣದಲ್ಲಿ ಭ್ರಷ್ಟಾಚಾರದ ವಿರುದ್ಧ ಏರ್ಪಡಿಸಲಾಗಿದ್ದ ಜಾಗೃತಿ ಅರಿವು ಸಪ್ತಾಹ – 2026 ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ, ಮಾತನಾಡುತ್ತಿದ್ದರು.
ಭ್ರಷ್ಟಾಚಾರ ಪಿಡುಗು. ಅದು ಸುಶಿಕ್ಷಿತ ಸಮಾಜಕ್ಕೆ ಅಂಟಿದ ಕಳಂಕವಾಗಿದೆ. ಸುಶಿಕ್ಷತ ಸಮಾಜ ನಿರ್ಮಾಣ ನಮ್ಮೆಲ್ಲರ ಉದ್ದೇಶವಾಗಬೇಕು. ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಬೇಕು ಅಲ್ಲದೆ ತಮ್ಮೊಳಗೆ ಅರಿವು ಮೂಡಿಸಿಕೊಂಡು ಮುನ್ನಡೆಯಬೇಕು ಎಂದ ಅವರು, ಉತ್ತಮ ದೇಶ, ರಾಜ್ಯ ನಿರ್ಮಾಣಕ್ಕೆ ಎಲ್ಲರೂ ಸಂಕಲ್ಪ ಮಾಡಬೇಕು ಎಂದರು.
ದೈನಂದಿನ ಕೆಲಸ-ಕಾರ್ಯಗಳಲ್ಲಿ ಆಕ್ಷೇಪಣೆ, ದೂರುಗಳು, ಆರೋಪಗಳು ಹೆಚ್ಚಾಗುತ್ತಲೆ ಇವೆ. ಇಂತಹ ಪ್ರತಿಕ್ರಿಯೆ ಸಾರ್ವಜನಿಕ ವಲಯದಲ್ಲಿ ಅಧಿಕಾರಿಗಳು ಮಾಡುವ ಕಾರ್ಯದ ಮಹತ್ವವನ್ನು ಹೇಳುತ್ತವೆ. ಅಲ್ಲದೇ ಮಹತ್ವದ್ದಾಗಿರುತ್ತವೆ. ಆರೋಪಗಳಿಗೆ ಕಾರಣ ಕಾರ್ಯದ ತೀಕ್ಷ್ಣತೆಯಾಗಿರಬಹುದು. ಅಧಿಕಾರಿ-ಸಿಬ್ಬಂಧಿಗಳು ಮಾಡುವ ಪ್ರತಿ ಕೆಲಸ-ಕಾರ್ಯಗಳನ್ನು ಸಾರ್ವಜನಿಕರು ಗಮನಿಸುತ್ತಲೇ ಇರುತ್ತಾರೆ. ಅದರಿಂದಲೇ ಇಂತಹ ಪ್ರತಿಕ್ರಿಯೆಗಳು ಬರುತ್ತವೆ. ಆದ್ದರಿಂದ ಆರೋಪಗಳಿಗೆ ಗಮನ ನೀಡದೇ ಕೆಲಸದಲ್ಲಿ ಪ್ರಾಮಾಣಿಕತೆ ಮೆರೆಯುವಂತೆ ಅವರು ಸಲಹೆ ನೀಡಿದರು.
• ಸಂವಿಧಾನ ದತ್ತವಾಗಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ರಸ್ತೆ ತಡೆ, ರೈಲ್‌ರೋಕೋ ದಂತಹ ಪ್ರತಿಭಟನೆಗಳು ಸಾರ್ವಜನಿಕರ ನೆಮ್ಮದಿಯ ಬದುಕಿಗೆ ಭಂಗವನ್ನು ಮಾಡುತ್ತಿವೆ. ನಮ್ಮ ಅನುಕೂಲಕ್ಕಾಗಿ ಮಾಡಿಕೊಂಡ ಅವಶ್ಯಕತೆಗಳನ್ನು, ನಿರ್ಬಂಧಗಳನ್ನು ನಾಗರೀಕರಾದ ನಾವೇ ನಿರ್ಲಕ್ಷಿಸುತ್ತಿರುವುದು ಸರಿಯಲ್ಲ. – ಮಂಜುನಾಥ ಜಿ.ಎ., ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಭಯ ಧನಪಾಲ ಚೌಗಲಾ ಅವರು ಮಾತನಾಡಿ, ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಅರ್ಹರಿಗೆ ಸೇವೆ ಒದಗಿಸಿದಲ್ಲಿ, ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದಲ್ಲಿ ಉತ್ತಮ ನಾಗರೀಕ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಿದಂತಾಗಲಿದೆ. ಇದರಿಂದಲೇ ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಭ್ರಷ್ಟಾಚಾರ ನಿರ್ಮೂಲನೆ ಎಂಬುದು ಸುಲಭದ ವಿಷಯವಲ್ಲ. ಎಲ್ಲರಲ್ಲೂ ಈ ಭಾವನೆ ಸ್ವಯಂಪ್ರೇರಿತವಾಗಿ ಸೃಜನೆಗೊಳ್ಳಬೇಕು ಎಂದವರು ನುಡಿದರು.
ಈ ಜಾಗೃತಿ ಅರಿವು ಸಪ್ತಾಹದಲ್ಲಿ ಉಪನ್ಯಾಸ ನೀಡಿದ ಹಿರಿಯ ಸಿವಿಲ್‌ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್‌ಅವರು ಮಾತನಾಡಿ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ; ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಭ್ರಷ್ಟಾಚಾರವು ದೇಶದ ಅಭಿವೃದ್ಧಿಗೆ ಅಡ್ಡಿಯಾಗುವುದರ ಜೊತೆಗೆ ಸಾರ್ವಜನಿಕರ ವಿಶ್ವಾಸವನ್ನೂ ಕುಂದಿಸುತ್ತದೆ. ಆದ್ದರಿಂದ ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಜನಪರ ಆಡಳಿತದ ಮೂಲಕ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಲಂಚ ಕೇಳುವುದು ತಪ್ಪು, ಕೊಡುವುದೂ ಕೂಡ ತಪ್ಪು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಮಾತನಾಡಿ, ಸರ್ಕಾರದ ಭಾಗವಾಗಿ ಕಾರ್ಯನಿರ್ವಹಿಸುವ ಅಧಿಕಾರಿ-ಸಿಬ್ಬಂಧಿಗಳು ತಮ್ಮ ಕೆಲಸದಲ್ಲಿ ಸಾರ್ವಜನಿಕ ಹಿತಾಸಕ್ತಿ ಇರಲಿ. ಸ್ವಹಿತಾಸಕ್ತಿ ಇಲ್ಲದಿರಲಿ. ಭ್ರಷ್ಟಾಚಾರ ವಿರೋಧಿಸುವ ಮನಸ್ಥಿತಿ ಇದ್ದು, ಅವು ಆಚರಣೆಯಲ್ಲಿ ಬರಲಿ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್‌ವರಿಷ್ಟಾಧಿಕಾರಿ ಬಿ.ನಿಖಿಲ್‌, ಶಿವಮೊಗ್ಗ ಮಹಾನಗರಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಲೋಕಾಯುಕ್ತ ಉಪಾಧೀಕ್ಷಕ ಬಿ.ಪಿ.ಚಂದ್ರಶೇಖರ್‌ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...