Sunday, November 1, 2026
Sunday, November 1, 2026

S.N. Channabasappa ವಾಲ್ಮೀಕಿ ಭವನಕ್ಕೆ ₹೫ ಕೋಟಿ ಅನುದಾನ, ಅಲೆಮಾರಿಗಳಿಗೆ ವಸತಿ ಹಾಗೂ ದಿ. ಚಂದ್ರಶೇಖರನ್ ಕುಟುಂಬಕ್ಕೆ ಪಿ.ಎಫ್ ಹಣ ಬಿಡುಗಡೆಗೆ ಸಚಿವರಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹ

Date:

S.N. Channabasappa ಪರಿಶಿಷ್ಟ ಪಂಗಡಗಳ ಸಮುದಾಯದ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ವಾಲ್ಮೀಕಿ ನಿಗಮದ ಹಗರಣದ ವೇಳೆ ಮೃತಪಟ್ಟ ಪ್ರಾಮಾಣಿಕ ನೌಕರ ದಿ. ಚಂದ್ರಶೇಖರನ್ ಅವರ ಕುಟುಂಬಕ್ಕೆ ಬರಬೇಕಾದ ಭವಿಷ್ಯ ನಿಧಿ (ಪಿ.ಎಫ್.) ಮೊತ್ತವನ್ನು ತಕ್ಷಣವೇ ಪಾವತಿಸುವಂತೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ಸಚಿವರಲ್ಲಿ ಒತ್ತಾಯಿಸಿದ್ದಾರೆ.

ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಎಸ್‌ಸಿಎಸ್‌ಪಿ (SCSP) ಮತ್ತು ಟಿಎಸ್‌ಪಿ (TSP) ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಶಾಸಕರು, ಮೂರು ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಿ ಸವಿಸ್ತಾರವಾಗಿ ಚರ್ಚಿಸಿದರು.

ಪ್ರಮುಖ ಬೇಡಿಕೆಗಳು:
ವಿದ್ಯಾರ್ಥಿ ನಿಲಯ ಹಾಗೂ ಭವನ ನಿರ್ಮಾಣ: ಶಿವಮೊಗ್ಗ ನಗರದ ಬಾಪೂಜಿ ನಗರದಲ್ಲಿರುವ ವಾಲ್ಮೀಕಿ ನಾಯಕ ಸಂಘದ ನಿವೇಶನದಲ್ಲಿ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹಾಸ್ಟೆಲ್ ಹಾಗೂ ಸಮುದಾಯ ಭವನ ನಿರ್ಮಿಸಲು ₹೫.೦೦ ಕೋಟಿ ವಿಶೇಷ ಅನುದಾನವನ್ನು ತಕ್ಷಣ ಮಂಜೂರು ಮಾಡಬೇಕು.

S.N. Channabasappa ಅಲೆಮಾರಿಗಳಿಗೆ ಬಾಕಿ ಮನೆಗಳ ಹಂಚಿಕೆ: ೨೦೨೨-೨೩ನೇ ಸಾಲಿನಲ್ಲಿ ಶಿವಮೊಗ್ಗ ತಾಲೂಕಿನಲ್ಲಿ ಗುರುತಿಸಲಾದ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಹಾಗೂ ಅತಿಸೂಕ್ಷ್ಮ ಸಮುದಾಯಗಳ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳಿಗೆ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಮನೆಗಳನ್ನು ಕೂಡಲೇ ಮಂಜೂರು ಮಾಡಬೇಕು.

ದಿ. ಚಂದ್ರಶೇಖರನ್ ಕುಟುಂಬಕ್ಕೆ ನ್ಯಾಯ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ವೇಳೆ ಆತ್ಮಹತ್ಯೆ ಮಾಡಿಕೊಂಡ ಶಿವಮೊಗ್ಗದ ನೌಕರ ದಿ. ಚಂದ್ರಶೇಖರನ್ ಅವರ ಕುಟುಂಬಕ್ಕೆ ಅವರ ಹಕ್ಕಿನ ಪಿ.ಎಫ್. (PF) ಹಣವನ್ನು ಇಲಾಖೆ ಇದುವರೆಗೂ ಮಂಜೂರು ಮಾಡದೆ ಅನ್ಯಾಯವೆಸಗಿದೆ. ನೊಂದ ಆ ಕುಟುಂಬಕ್ಕೆ ಕೂಡಲೇ ಪಿ.ಎಫ್. ಮೊತ್ತವನ್ನು ವಿಳಂಬವಿಲ್ಲದೆ ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕೆಂದು ಸಚಿವರ ಗಮನ ಸೆಳೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...