Sunday, November 1, 2026
Sunday, November 1, 2026

ಆಗುಂಬೆ ಬಳಿ ಭೀಕರ ರಸ್ತೆ ಅಪಘಾತ: ಶಿವಮೊಗ್ಗದ ಸಿಮ್ಸ್ ವೈದ್ಯಕೀಯ ವಿದ್ಯಾರ್ಥಿ ಸಾವು, ನಾಲ್ವರಿಗೆ ಗಂಭೀರ ಗಾಯ

Date:

ತೀರ್ಥಹಳ್ಳಿ ತಾಲೂಕಿನ ಆಗುಂಬೆ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗದ ಸಿಮ್ಸ್ ವೈದ್ಯಕೀಯ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ರಾಯಚೂರು ಮೂಲದ 28 ವರ್ಷದ ಡಾ. ಚೇತನ್ ಎಂದು ಗುರುತಿಸಲಾಗಿದೆ.

ಇಂದು ಮುಂಜಾನೆ ಸುಮಾರು 5.45ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಐವರು ವೈದ್ಯಕೀಯ ವಿದ್ಯಾರ್ಥಿಗಳು ಕಾರಿನಲ್ಲಿ ಶಿವಮೊಗ್ಗದ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತಕ್ಕೀಡಾಗಿದೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಮತ್ತು ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...