Monday, November 2, 2026
Monday, November 2, 2026

ಶಿವಮೊಗ್ಗದ ಸೈಯದ್ ಪೈಜಲ್‌ಗೆ ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆ; ನಿಖಿತಾಗೆ ಬೆಳ್ಳಿ ಪದಕ

Date:

ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮೂಲಕ ಸ್ಕೇಟಿಂಗ್ ಕಲಿಕೆ ಪಡೆಯುತ್ತಿರುವ ಸೈಯದ್ ಪೈಜಲ್ ಎಂಬ ಸ್ಕೇಟರ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಅದರೊಂದಿಗೆ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ನಿಕಿತಾ ಎಸ್ ಉಪಾಧ್ಯ ಅವರು ಬೆಳ್ಳಿ ಪದಕವನ್ನು ಗಳಿಸಿರುವುದನ್ನು ಸಂಸ್ಥೆ ಆತ್ಮೀಯವಾಗಿ ಅಭಿನಂದಿಸಿದೆ.
ಬೆಳಗಾವಿಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಸಿದ 14 ರಿಂದ 17 ವರ್ಷ ವಯೋಮಿತಿಯ ರಾಜ್ಯಮಟ್ಟದ ಸ್ಕೇಟಿಂಗ್ ಕ್ರೀಡಾಕೂಟದಲ್ಲಿ ನಮ್ಮ ಶಿವಮೊಗ್ಗ ಸ್ಕೇಟಿಂಗ್ ತಂಡದ ಹಾಗೂ ಕೋಟೆಗಂಗೂರಿನ ಲಕ್ಷ್ಯ ಸ್ಕೂಲ್ ನ ವಿದ್ಯಾರ್ಥಿ ಸೈಯದ್ ಪೈಜಲ್ ಎರಡು ಚಿನ್ನ ಹಾಗೂ ಒಂದು ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ರೋಡ್ ಮತ್ತು ರಿಂಕ್ ರೇಸ್ ನಲ್ಲಿ ರಾಷ್ಟ್ರಮಟ್ಟದ ಪ್ರಥಮ ಕ್ರೀಡಾಪಟುವಾಗಿ ಆಯ್ಕೆಯಾಗಿರುವುದನ್ನು ಸಂಸ್ಥೆ ತುಂಬು ಹೃದಯದಿಂದ ಸ್ವಾಗತಿಸಿದೆ.
ಅಂತೆಯೇ ನಿಖಿತಾ ಎನ್. ಉಪಾಧ್ಯ ಅವರು ವಿಕಾಸ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಅವರು ಬೆಳ್ಳಿ ಪದಕವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಹಾಗೂ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಶಿವಮೊಗ್ಗದ ಕೀರ್ತಿಪತಾಕೆಯನ್ನು ಹಾರಿಸಿದ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಕ್ರೀಡಾಪಟುಗಳಿಗೆ ಸ್ಕೇಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಮೋಹನ್ ಕುಮಾರ್, ಉಪಾಧ್ಯಕ್ಷ ಗಜೇಂದ್ರಸ್ವಾಮಿ, ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಸ್ಕೇಟಿಂಗ್ ಸಮಿತಿಯ ಸಹಕಾರ್ಯದರ್ಶಿ ಎಂ. ರವಿ ಹಾಗೂ ಎಲ್ಲಾ ಪದಾಧಿಕಾರಿಗಳು, ಮಾಜಿ ಕಾರ್ಪೂರೇಟರ್ ಈ. ವಿಶ್ವಾಸ್ ಅವರು ಅಭಿನಂದಿಸಿದ್ದಾರೆ.
ವಿಜಯಶಾಲಿ ಕ್ರೀಡಾಪಟುಗಳಿಗೆ ಶಿವಮೊಗ್ಗ ಗೋಪಾಳದ ಕ್ರೀಡಾಸಂಕೀರ್ಣದಲ್ಲಿ ಸಂಸ್ಥೆಯ ತರಬೇತುದಾರರಾದ ವಿಶ್ವಾಸ್ ಹಾಗೂ ಅತಿಶ್ ಅವರು ತರಬೇತಿ ನೀಡಿದ್ದಾರೆ.
ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶಿವಮೊಗ್ಗ ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್, ಹಾಗೂ ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು, ದೈಹಿಕ ಶಿಕ್ಷಕ ಶಿಕ್ಷಣ ವಿಭಾಗದ ಅಧಿಕಾರಿಗಳು, ಅನುದಾನರಹಿತ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾ.ಹ. ತಿಮ್ಮೇನಹಳ್ಳಿ ಹಾಗೂ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...